ಭಾರತ – ಇಂಗ್ಲಂಡ್ ಕ್ರಿಕೆಟ್ ಟೆಸ್ಟ್ : ಭಾರತಕ್ಕೆ ಇನ್ನಿಂಗ್ಸ್ ಅಂತರದ ಜಯ

Prasthutha: March 6, 2021
ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಲಗ್ಗೆ ಇಟ್ಟ ಭಾರತ

ಭಾರತ ಮತ್ತು ಇಂಗ್ಲೆಂಡ್ ನಡುವಿನ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಅಂತರದಲ್ಲಿ ಜಯಭೇರಿಗೊಂಡಿದ್ದು, ಸ್ಮರಣೀಯ ಸರಣಿ ವಿಜಯ ದಾಖಲಿಸಿದೆ. ಇದರೊಂದಿಗೆ ಭಾರತ ವಿಶ್ವ ಟೆಸ್ಟ್ ಕ್ರಿಕೆಟ್ ಚಾಂಪಿಯನ್ ಶಿಪ್ ಫೈನಲ್ ತಲುಪಿದೆ.
ಭಾರತೀಯ ಬೌಲರ್‌ಗಳ ಕಠಿಣ ದಾಳಿಗೆ ತತ್ತರಿಸಿದ ಆಂಗ್ಲರು ದ್ವಿತೀಯ ಇನ್ನಿಂಗ್ಸ್ ನಲ್ಲೂ ವೈಫಲ್ಯ ಅನುಭವಿಸಿದರು. ಆರ್ ಅಶ್ವಿನ್ ಮತ್ತು ಅಕ್ಷರ್ ಪಟೇಲ್ ಅವರ ಮಾರಕ ಬೌಲಿಂಗ್ ಗೆ ತತ್ತರಿಸಿದ ಇಂಗ್ಲೆಂಡ್ ದಾಂಡಿಗರು ಪೆವಿಲಿಯನ್ ಗೆ ಪೆರೇಡ್ ನಡೆಸಿದರು. 135 ರನ್ ಗಳಿಗೆ ಇಂಗ್ಲಂಡ್ ತಂಡ ತನ್ನ ಎಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು ಇನ್ನಿಂಗ್ಸ್ ಮತು 25 ರನ್ ಗಳ ಅಂತರದಲ್ಲಿ ಸೋಲೊಪ್ಪಿಕೊಂಡಿತು. ಭಾರತದ ಬೌಲಿಂಗ್ ವಿಭಾಗದಲ್ಲಿ ಅಕ್ಷರ್ ಪಟೇಲ್ 48 ರನ್ ನೀಡಿ 5 ವಿಕೆಟ್, ರವಿಚಂದ್ರನ್ ಅಶ್ವಿನ್ 47 ರನ್ ಗಳನ್ನು ನೀಡಿ 5 ವಿಕೆಟ್ ಪಡೆದರು.

ಈ ವಿಜಯದೊಂದಿಗೆ ಭಾರತ ಇಂಗ್ಲಂಡ್ ನ ಲಾರ್ಡ್ಸ್ ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಫೈನಲ್ ಗೆ ಲಗ್ಗೆ ಇಟ್ಟಿದೆ. ಫೈನಲಿನಲ್ಲಿ ಭಾರತ ನ್ಯೂಝಿಲಂಡನ್ನು ಎದುರಿಸಲಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!