ಅಂತಾರಾಷ್ಟ್ರೀಯ ವಿಮಾನಗಳ ಮೇಲಿನ ನಿಷೇಧ ಸೆಪ್ಟೆಂಬರ್ ಅಂತ್ಯದ ವರೆಗೆ ಮುಂದುವರಿಯಲಿದೆ : ಭಾರತೀಯ ವಿಮಾನಯಾನ ಸಂಸ್ಥೆ ಹೇಳಿಕೆ

Prasthutha|

ನವದೆಹಲಿ: ಪ್ರಸಕ್ತ ಕೋವಿಡ್ – 19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 30 ರ ವರೆಗೆ ಅಂತರಾಷ್ಟ್ರೀಯ ವಿಮಾನಗಳ ಮೇಲಿನ ನಿಷೇಧವನ್ನು ಮುಂದುವರಿಸುವುದಾಗಿ ಭಾರತೀಯ ನಾಗರಿಕ ವಿಮಾನಯಾನ ಸಂಸ್ಥೆಯ ಮಹಾ ನಿರ್ದೇಶಕರು ಭಾನುವಾರ ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

- Advertisement -

ಈ ಮಧ್ಯೆ ನಿಗದಿತ ಆಯ್ದ ಮಾರ್ಗಗಳಲ್ಲಿ ವಿಶೇಷ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ಅನುಮತಿಸಲಿದೆಯೆಂದು ನಾಗರಿಕ ವಿಮಾನಯಾನ ಸಂಸ್ಥೆಯ ಮಹಾ ನಿರ್ದೇಶಕರು ಹೊರಡಿಸಿದ ಸುತ್ತೋಲೆಯಲ್ಲಿ ನಮೂದಿಸಲಾಗಿದೆ.

ಈ ನಿರ್ಬಂಧವು ಅಂತಾರಾಷ್ಟ್ರೀಯ ಎಲ್ಲಾ ಸರಕು ಸೇವಾ ವಿಮಾನ ಮತ್ತು ನಿರ್ದಿಷ್ಟವಾಗಿ ಡಿಜಿಸಿಎ ಅನುಮೋದಿಸಿದ ವಿಮಾನಗಳಿಗೆ ಅನ್ವಯಿಸುವುದಿಲ್ಲ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

- Advertisement -

ಈ ಮೊದಲು ನಿಗದಿತ ಅಂತಾರಾಷ್ಟ್ರೀಯ ವಿಮಾನಗಳನ್ನು ಆಗಸ್ಟ್ 31 ರವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಡಿಜಿಸಿಎ ಜುಲೈ 30, 2021 ರಂದು ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಲಾಗಿತ್ತು.

Join Whatsapp