ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬರದಂತೆ ತಡೆಯುವ ವಿಶ್ವಾಸವನ್ನು ವಿಪಕ್ಷಗಳ ಮೈತ್ರಿಕೂಟ ಹೊಂದಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಅವರು, ಸಮಾಜದಲ್ಲಿ ದ್ವೇಷ ಮತ್ತು ವಿಭಜನೆಯನ್ನು ಹರಡುವ ಬಿಜೆಪಿ ಮತ್ತು ಆರ್ಎಸ್ಎಸ್ ಸಿದ್ಧಾಂತದ ವಿರುದ್ಧ ಈಗ ಜನರು ಹೋರಾಡುತ್ತಿದ್ದಾರೆ.ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಹೋರಾಟ ಎಂದು ಜನರು ಭಾವಿಸಿದ್ದು, ಪಕ್ಷಕ್ಕೆ ಬೆಂಬಲ ನೀಡಿದ್ದಾರೆ ಎಂದರು.
ರಾಮಮಂದಿರ, ಹಿಂದೂ-ಮುಸ್ಲಿಂ ಮತ್ತು ಭಾರತ-ಪಾಕಿಸ್ತಾನದ ಹೆಸರಿನಲ್ಲಿ ಬಿಜೆಪಿ ಪದೇ ಪದೇ ಜನರನ್ನು ಪ್ರಚೋದಿಸುತ್ತದೆ ಮತ್ತು “ಭಾವನಾತ್ಮಕವಾಗಿ ಲೂಟಿ” ಮಾಡುತ್ತಿದೆ ಎಂದು ಆರೋಪಿಸಿದ ಖರ್ಗೆ ಅವರು ಈಗ ಅವರ ನಿಜವಾದ ಬಣ್ಣವನ್ನು ಜನರು ಅರ್ಥಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.