ಸಂವಿಧಾನ ಪುಸ್ತಕ ಹಿಡಿದು ಸಂಸತ್ ಪ್ರವೇಶಿಸಿದ ‘ಇಂಡಿಯಾ’ ನಾಯಕರು

Prasthutha|

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಪ್ರಾರಂಭಕ್ಕೂ ಮುನ್ನ ಇಂಡಿಯಾ ಮೈತ್ರಿಕೂಟದ ಎಲ್ಲ ನಾಯಕರು ಜೊತೆಯಾಗಿ ಸಂಸತ್ ಪ್ರವೇಶಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದಾರೆ.

- Advertisement -


ಈ ವೇಳೆ ಎಲ್ಲ ನಾಯಕರು ಸಂವಿಧಾನ ಪುಸ್ತಕವನ್ನು ಹಿಡಿದುಕೊಂಡಿದ್ದಾರೆ. ನಂತರ ಸಂಸತ್ ಭವನದ ಮುಂದೆ ಜಮಾಯಿಸಿದ ನಾಯಕರು, ‘ನಾವು ಸಂವಿಧಾನ ಉಳಿಸುತ್ತೇವೆ’, ‘ಪ್ರಜಾಪ್ರಭುತ್ವ ಉಳಿಸಿ’, ‘ಲಾಂಗ್ ಲೈವ್ ಕಾನ್ಸ್ಟಿಟ್ಯೂಷನ್’ ಎಂಬ ಘೋಷಣೆಗಳನ್ನು ಕೂಗಿದರು.

Join Whatsapp
Exit mobile version