ನವದೆಹಲಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜನ್ಮ ದಿನದಂದು ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯ ನಡೆದ ಕಾರಣ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಸೋತಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಎಲ್ಲಾ ಪಂದ್ಯಗಳಲ್ಲಿ ಗೆದ್ದ ಭಾರತ ತಂಡ ಫೈನಲ್ನಲ್ಲಿ ಯಾಕೆ ಸೋತಿತು? ಎಂದು ನಾನು ಪರಿಶೀಲಿಸಿದೆ. ಈ ವೇಳೆ ಇಂದಿರಾ ಗಾಂಧಿಯವರ ಜನ್ಮ ದಿನದಂದು ಪಂದ್ಯ ನಡೆದಿರುವುದು ಗೊತ್ತಾಯಿತು ಎಂದು ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ ಮೂಲಕ ಇಂದಿರಾ ಗಾಂಧಿಯವರ ಜನ್ಮದಿನ ಒಂದು ‘ಕೆಟ್ಟ ದಿನ’ ಎಂಬರ್ಥದಲ್ಲಿ ಮಾತನಾಡಿದ್ದಾರೆ.