ರಷ್ಯಾ ವಿರುದ್ಧದ ನಿರ್ಣಯಕ್ಕೆ ವಿಶ್ವಸಂಸ್ಥೆಯಲ್ಲಿ 141 ಮತ: ಭಾರತ ತಟಸ್ಥ

Prasthutha|

ವಿಶ್ವಸಂಸ್ಥೆಉಕ್ರೇನ್‌ನ ಮೇಲಿನ ರಷ್ಯಾದ ಆಕ್ರಮಣವನ್ನು ಖಂಡಿಸಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಬುಧವಾರ ನಿರ್ಣಯ ಅಂಗೀಕರಿಸಲಾಗಿದ್ದು, ಏಷ್ಯಾ ರಾಷ್ಟ್ರಗಳಾದ ಭಾರತ, ಚೀನಾ, ಪಾಕಿಸ್ತಾನ ಸಭೆಯಿಂದ ದೂರ ಉಳಿದು ನಿರ್ಲಿಪ್ತತೆ ಪ್ರದರ್ಶಿಸಿವೆ.

- Advertisement -

ಒಟ್ಟು 193 ದೇಶಗಳ ಪೈಕಿ 141 ದೇಶಗಳು ನಿರ್ಣಯದ ಪರವಾಗಿ ಮತ ಚಲಾಯಿಸಿದವು. ರಷ್ಯಾ, ಬೆಲರೂಸ್‌ ಎರಿಟ್ರಿಯಾ, ಉತ್ತರ ಕೊರಿಯಾ, ಸಿರಿಯಾ… ಈ ಐದು ದೇಶಗಳು ನಿರ್ಣಯದ ವಿರುದ್ಧ ಮತ ಹಾಕಿವೆ. 

ರಷ್ಯಾ ಈ ಕೂಡಲೇ ಸೇನಾ ಕಾರ್ಯಾಚರಣೆಯನ್ನು ನಿಲ್ಲಿಸಬೇಕು, ಸಮಸ್ಯೆಯ ಶಾಂತಿಯುತ ಪರಿಹಾರಕ್ಕಾಗಿ ರಾಜತಾಂತ್ರಿಕ ಮಾರ್ಗ ಅನುಸರಿಸಬೇಕು, ನಾಗರಿಕರನ್ನು ರಕ್ಷಿಸಬೇಕು ಎಂಬ ಅಂಶಗಳು ನಾಲ್ಕು ಪುಟಗಳ ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.

Join Whatsapp