ಏರ್ ಸೆಲ್–ಮ್ಯಾಕ್ಸಿಸ್ ಪ್ರಕರಣ| ಮಾಜಿ ಸಚಿವ ಪಿ. ಚಿದಂಬರಂ, ಮಗ ಕಾರ್ತಿಗೆ ಸಮನ್ಸ್

Prasthutha|

ಹೊಸದಿಲ್ಲಿ: ಏರ್ ಸೆಲ್–ಮ್ಯಾಕ್ಸಿಸ್ ಪ್ರಕರಣದಲ್ಲಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಚಾರ್ಜ್ ಶೀಟನ್ನು ಪರಿಶೀಲಿಸಿದ ದೆಹಲಿ ಕೋರ್ಟ್, ಡಿಸೆಂಬರ್ 20ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಮತ್ತು ಅವರ ಮಗ ಕಾರ್ತಿಗೆ ಸಮನ್ಸ್ ಜಾರಿ ಮಾಡಿದೆ.

- Advertisement -

ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ದಾಖಲಿಸಿರುವ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಚಿದಂಬರಂ ಮತ್ತು ಇತರ ಆರೋಪಿಗಳ ವಿರುದ್ಧ ಸಮರ್ಪಕ ಸಾಕ್ಷಿಗಳು ಲಭ್ಯವಿವೆ ಎಂದು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಂ.ಕೆ. ನಾಗಪಾಲ್ ಅಭಿಪ್ರಾಯಪಟ್ಟಿದ್ದಾರೆ. ಆ ಹಿನ್ನೆಲೆಯಲ್ಲಿ ಚಿದಂಬರಂ ಮತ್ತು ಅವರ ಮಗ ಕಾರ್ತಿಯವರಿಗೆ ಸಮನ್ಸ್ ಜಾರಿ ಮಾಡಿದ್ದಾರೆ.

ಸುಮಾರು 3500 ಕೋಟಿ ಮೊತ್ತದ ಈ ಹಗರಣ 2006ರಲ್ಲಿ ನಡೆದಿದ್ದು, ಆಗ ಚಿದಂಬರಂ ವಿತ್ತ ಸಚಿವರಾಗಿದ್ದರು.

Join Whatsapp