Home ಟಾಪ್ ಸುದ್ದಿಗಳು ಏರ್ ಸೆಲ್–ಮ್ಯಾಕ್ಸಿಸ್ ಪ್ರಕರಣ| ಮಾಜಿ ಸಚಿವ ಪಿ. ಚಿದಂಬರಂ, ಮಗ ಕಾರ್ತಿಗೆ ಸಮನ್ಸ್

ಏರ್ ಸೆಲ್–ಮ್ಯಾಕ್ಸಿಸ್ ಪ್ರಕರಣ| ಮಾಜಿ ಸಚಿವ ಪಿ. ಚಿದಂಬರಂ, ಮಗ ಕಾರ್ತಿಗೆ ಸಮನ್ಸ್

ಹೊಸದಿಲ್ಲಿ: ಏರ್ ಸೆಲ್–ಮ್ಯಾಕ್ಸಿಸ್ ಪ್ರಕರಣದಲ್ಲಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಚಾರ್ಜ್ ಶೀಟನ್ನು ಪರಿಶೀಲಿಸಿದ ದೆಹಲಿ ಕೋರ್ಟ್, ಡಿಸೆಂಬರ್ 20ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಮತ್ತು ಅವರ ಮಗ ಕಾರ್ತಿಗೆ ಸಮನ್ಸ್ ಜಾರಿ ಮಾಡಿದೆ.

ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ದಾಖಲಿಸಿರುವ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಚಿದಂಬರಂ ಮತ್ತು ಇತರ ಆರೋಪಿಗಳ ವಿರುದ್ಧ ಸಮರ್ಪಕ ಸಾಕ್ಷಿಗಳು ಲಭ್ಯವಿವೆ ಎಂದು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಂ.ಕೆ. ನಾಗಪಾಲ್ ಅಭಿಪ್ರಾಯಪಟ್ಟಿದ್ದಾರೆ. ಆ ಹಿನ್ನೆಲೆಯಲ್ಲಿ ಚಿದಂಬರಂ ಮತ್ತು ಅವರ ಮಗ ಕಾರ್ತಿಯವರಿಗೆ ಸಮನ್ಸ್ ಜಾರಿ ಮಾಡಿದ್ದಾರೆ.

ಸುಮಾರು 3500 ಕೋಟಿ ಮೊತ್ತದ ಈ ಹಗರಣ 2006ರಲ್ಲಿ ನಡೆದಿದ್ದು, ಆಗ ಚಿದಂಬರಂ ವಿತ್ತ ಸಚಿವರಾಗಿದ್ದರು.

Join Whatsapp
Exit mobile version