Home ಟಾಪ್ ಸುದ್ದಿಗಳು ಭಾರತ–ಪಾಕಿಸ್ತಾನ ಉದ್ವಿಗ್ನತೆ: ಸಂಪಾದಕರನ್ನು ಭೇಟಿಯಾಗಿ ವಾಸ್ತವ ವರದಿ ಪ್ರಕಟಿಸಿ ಎಂದ ಸಚಿವ ಅಶ್ವಿನಿ ವೈಷ್ಣವ್‌

ಭಾರತ–ಪಾಕಿಸ್ತಾನ ಉದ್ವಿಗ್ನತೆ: ಸಂಪಾದಕರನ್ನು ಭೇಟಿಯಾಗಿ ವಾಸ್ತವ ವರದಿ ಪ್ರಕಟಿಸಿ ಎಂದ ಸಚಿವ ಅಶ್ವಿನಿ ವೈಷ್ಣವ್‌

0

ನವದೆಹಲಿ: ಮಾಧ್ಯಮ ಪ್ರತಿನಿಧಿಗಳನ್ನು ಶುಕ್ರವಾರ ಭೇಟಿಯಾಗಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್‌, ಭಾರತ ಹಾಗೂ ಪಾಕಿಸ್ತಾನ ನಡುವಣ ಸೇನಾ ಸಂಘರ್ಷದ ಸಂದರ್ಭದಲ್ಲಿ ವಾಸ್ತವ ವರದಿಗಳನ್ನು ಪ್ರಕಟಿಸುವಂತೆ ಮನವಿ ಮಾಡಿದ್ದಾರೆ. ಇದೇ ವೇಳೆ ಅವರು, ಜವಾಬ್ದಾರಿಯುತ ವರದಿಗಾರಿಕೆಯ ಮಹತ್ವವನ್ನು ಪ್ರತಿಪಾದಿಸಿದ್ದಾರೆ.

ಮುದ್ರಣ ಮಾಧ್ಯಮಗಳ ಸಂಪಾದಕರೊಂದಿಗೆ ಸಂವಹನ ನಡೆಸಿರುವ ವೈಷ್ಣವ್‌, ಸಂಘರ್ಷಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಪ್ರಕಟಿಸುವುದಕ್ಕೂ ಮುನ್ನ ಮಾಹಿತಿಯನ್ನು ಪರಿಶೀಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಹಾಗೂ ಭದ್ರತಾ ಪಡೆಗಳ ಚಲನವಲನಗಳ ನೇರ ಪ್ರಸಾರ ಮಾಡುವುದನ್ನು ವಿದ್ಯುನ್ಮಾನ ಮಾಧ್ಯಮಗಳು ನಿಲ್ಲಿಸಬೇಕು. ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹೊರಡಿಸಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದ್ದಾರೆ.

ಭಾರತೀಯ ಸಶಸ್ತ್ರ ಪಡೆಗಳು ತೆಗೆದುಕೊಂಡಿರುವ ಕ್ರಮವು, ಭಯೋತ್ಪಾದನೆ ವಿರುದ್ಧವೇ ಹೊರತು ಯಾವುದೇ ದೇಶ ಅಥವಾ ಸಮುದಾಯದ ವಿರುದ್ಧವಲ್ಲ ಎಂಬುದನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version