ಹೊಸದಿಲ್ಲಿ: ಪೆಗಾಸಸ್ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟಿನಲ್ಲಿ ಭಾರಿ ಮುಖಭಂಗ ಅನುಭವಿಸಿದೆ.
ರಾಷ್ಟ್ರೀಯ ಭದ್ರತೆಯ ಹೆಸರಿನಲ್ಲಿ ಎಲ್ಲಾ ಆರೋಪಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠ ಹೇಳಿದೆ.
ಫೋನ್ ಸೋರಿಕೆ ವಿವರಣೆಯಲ್ಲಿ ಕೇಂದ್ರ ಸರ್ಕಾರದ ನಂಬಿಕೆ ಇಲ್ಲ ಎಂದು ಸುಪ್ರೀಂ ಕೋರ್ಟ್ ಪರೋಕ್ಷವಾಗಿ ಹೇಳಿದೆ.
ಪೆಗಾಸಸ್ ಸಾಫ್ಟ್ ವೇರ್ ಬಳಸಿ ಫೋನ್ ಸೋರಿಕೆ ಮಾಡಲಾಗಿದೆಯೇ ಎಂಬ ಪ್ರಶ್ನೆಗೆ ಸ್ಪಷ್ಟ ಉತ್ತರ ನೀಡದ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ.
ರಾಷ್ಟ್ರೀಯ ಭದ್ರತೆಯೆಂಬ ನೆಪ ಕೇಳಿ ನ್ಯಾಯಾಲಯ ಕೇವಲ ಪ್ರೇಕ್ಷಕನಾಗಿರಲು ಸಾಧ್ಯವಿಲ್ಲ. ವ್ಯಕ್ತಿಗಳ ಖಾಸಗಿತನ ಮುಖ್ಯ. ನಾಗರಿಕರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪ ಇದೆ. ಅದು ಗಂಭೀರ ವಿಷಯವಾಗಿದೆ ಎಂದು ನ್ಯಾಯಾಲಯ ಕೇಂದ್ರಕ್ಕೆ ತಿಳಿಸಿದೆ.