ಸೂಕಿಗೆ ಜೈಲು ಶಿಕ್ಷೆ| ಮ್ಯಾನ್ಮಾರ್ ನ್ಯಾಯಾಲಯದ ತೀರ್ಪಿನಿಂದ ಆಘಾತವಾಗಿದೆ ಎಂದ ಭಾರತ

Prasthutha|

ನವದೆಹಲಿ: ನಾಗರಿಕ ಹೋರಾಟಗಾರ್ತಿ ಆಂಗ್ ಸಾನ್ ಸೂಕಿ ಸೇರಿದಂತೆ ಕೆಲವರ ವಿರುದ್ಧ ಮ್ಯಾನ್ಮಾರ್ ನ್ಯಾಯಾಲಯ ನೀಡಿರುವ ತೀರ್ಪಿನಿಂದ ಆಘಾತವಾಗಿದೆ ಎಂದು ಭಾರತ ತಿಳಿಸಿದೆ.

- Advertisement -

ಕೋವಿಡ್ ನಿಯಮ ಉಲ್ಲಂಘನೆ ಮತ್ತು ಶಾಂತಿ ಭಂಗ ಉಂಟುಮಾಡಿದ ಆರೋಪಗಳಿಗೆ ಸಂಬಂಧಿಸಿದಂತೆ ಸೂಕಿ ಅವರಿಗೆ ನಾಲ್ಕು ವರ್ಷ ಶಿಕ್ಷೆ ಪ್ರಕಟಿಸಲಾಗಿತ್ತು. ಬಳಿಕ ಶಿಕ್ಷೆಯ ಪ್ರಮಾಣವನ್ನು ಎರಡು ವರ್ಷಕ್ಕೆ ಇಳಿಸಲಾಗಿದೆ.

ಮ್ಯಾನ್ಮಾರ್‌ನಲ್ಲಿ ಸೂಕಿ ಮತ್ತು ಇತರರ ವಿರುದ್ಧ ನೀಡಲಾಗಿರುವ ತೀರ್ಪುಗಳಿಗೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗಳಿಗೆ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಪ್ರತಿಕ್ರಿಯಿಸಿದ್ದಾರೆ.

- Advertisement -

‘ಇತ್ತೀಚಿನ ತೀರ್ಪುಗಳಿಂದ ನಾವು ಆಘಾತಗೊಂಡಿದ್ದೇವೆ. ನೆರೆಯ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಭಾರತವು ಮ್ಯಾನ್ಮಾರ್‌ ನ ಪ್ರಜಾಸತ್ತಾತ್ಮಕ ಪರಿವರ್ತನೆಯನ್ನು ನಿರಂತರವಾಗಿ ಬೆಂಬಲಿಸುತ್ತಿದೆ. ಕಾನೂನು ಮತ್ತು ಪ್ರಜಾಪ್ರಭುತ್ವದ ಪ್ರಕ್ರಿಯೆಗಳನ್ನು ಎತ್ತಿ ಹಿಡಿಯಬೇಕು ಎಂಬುದರಲ್ಲಿ ನಂಬಿಕೆ ಇಟ್ಟಿದ್ದೇವೆ. ಆ ಪ್ರಕ್ರಿಯೆಯನ್ನು ದುರ್ಬಲಗೊಳಿಸುವ ಯಾವುದೇ ಘಟನೆಗಳು ನಡೆಯುವುದು ಕಳವಳದ ಸಂಗತಿ’ ಎಂದು ಅವರು ಹೇಳಿದ್ದಾರೆ.

Join Whatsapp