Home ಟಾಪ್ ಸುದ್ದಿಗಳು 146 ಸಂಸದರ ಅಮಾನತು ಖಂಡಿಸಿ ಜಂತರ್‌ ಮಂತರ್ ನಲ್ಲಿ ‘INDIA’ ಧರಣಿ

146 ಸಂಸದರ ಅಮಾನತು ಖಂಡಿಸಿ ಜಂತರ್‌ ಮಂತರ್ ನಲ್ಲಿ ‘INDIA’ ಧರಣಿ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ 146 ಸದಸ್ಯರ ಅಮಾನತುಗೊಳಿಸಿದ ಕ್ರಮವನ್ನು ವಿರೋಧಿಸಿ ಇಂದು ದೇಶಾದ್ಯಂತ ವಿರೋಧ ಪಕ್ಷಗಳ INDIA ಮೈತ್ರಿಕೂಟದ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ದೆಹಲಿಯಲ್ಲಿ ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ INDIA ಒಕ್ಕೂಟದ ನಾಯಕರು ಧರಣಿ ಆರಂಭಿಸಿದ್ದಾರೆ.

ಲೋಕಸಭೆ ಮತ್ತು ರಾಜ್ಯಸಭೆಯಿಂದ ವಿರೋಧ ಪಕ್ಷಗಳ 146 ಸದಸ್ಯರ ಅಮಾನತು ಖಂಡಿಸಿ ಇಂಡಿಯಾ ಬಣದ ನಾಯಕರು ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ಆರಂಭಿಸಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಎನ್‌ಸಿಪಿ ವರಿಷ್ಠ ಶರದ್ ಪವಾರ್ ಮತ್ತು ಸಂಸದರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಇದಲ್ಲದೆ, ಎಲ್ಲ ರಾಜ್ಯಗಳ ಜಿಲ್ಲಾ ಕೆಂದ್ರಗಳಲ್ಲೂ ಇಂಡಿಯಾ ಬಣದ ಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ.

Join Whatsapp
Exit mobile version