Home ಟಾಪ್ ಸುದ್ದಿಗಳು ಏಷ್ಯಾಕಪ್ ಗೆ ಟೀಂ ಇಂಡಿಯಾ ಪ್ರಕಟ; ರಾಹುಲ್, ಶ್ರೇಯಸ್ ಅಯ್ಯರ್ ಇನ್..!

ಏಷ್ಯಾಕಪ್ ಗೆ ಟೀಂ ಇಂಡಿಯಾ ಪ್ರಕಟ; ರಾಹುಲ್, ಶ್ರೇಯಸ್ ಅಯ್ಯರ್ ಇನ್..!

ನವದೆಹಲಿ: ಆಗಸ್ಟ್ 30 ರಿಂದ ಆರಂಭವಾಗಲಿರುವ ಏಕದಿನ ಏಷ್ಯಾಕಪ್ ಗೆ 17 ಸದಸ್ಯರ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ.


ದೆಹಲಿಯಲ್ಲಿ ಅಜಿತ್ ಅಗರ್ಕರ್ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ಈ ತಂಡವನ್ನು ಪ್ರಕಟಿಸಲಾಗಿದೆ. ಎಂದಿನಂತೆ ಟೀಂ ಇಂಡಿಯಾದ ನಾಯಕತ್ವ ರೋಹಿತ್ ಶರ್ಮಾ ಅವರ ಕೈಯಲ್ಲಿದ್ದು, ಉಪನಾಯಕರಾಗಿ ಹಾರ್ದಿಕ್ ಪಾಂಡ್ಯ ಮುಂದುವರೆಯಲ್ಲಿದ್ದಾರೆ.

ನಿರೀಕ್ಷೆಯಂತೆ ಬಹಳ ದಿನಗಳ ನಂತರ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಏಷ್ಯಾಕಪ್ ಮೂಲಕ ಟೀಂ ಇಂಡಿಯಾಕ್ಕೆ ಮರಳಿದ್ದಾರೆ. ಆದರೆ ಈ ಮೊದಲೇ ಊಹಿಸಿದಂತೆ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅವರನ್ನು ಏಕದಿನ ಏಷ್ಯಾಕಪ್ ತಂಡದಿಂದ ಕೈಬಿಡಲಾಗಿದೆ. ಆದರೆ ಅಚ್ಚರಿಯ ಆಯ್ಕೆ ಎಂಬಂತೆ ಕೇವಲ 8 ಟಿ20 ಪಂದ್ಯಗಳನ್ನಾಡಿರುವ ಹಾಗೂ ಒಂದೇ ಒಂದು ಏಕದಿನ ಪಂದ್ಯವನ್ನಾಡಿದ ಅನುಭವ ಹೊಂದಿರದ ಎಡಗೈ ಬ್ಯಾಟರ್ ತಿಲಕ್ ವರ್ಮಾ ಅವರಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ.

Join Whatsapp
Exit mobile version