ಮುಂಬಯಿ: ಶ್ರೀಲಂಕಾ ವಿರುದ್ಧ ತವರಿನಲ್ಲಿ ನಡೆಯಲಿರುವ T-20 ಹಾಗೂ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ನಾಲ್ವರು ಹಿರಿಯ ಆಟಗಾರರನ್ನು ತಂಡದಿಂದ ಕೈ ಬಿಡಲಾಗಿದೆ.
ಚೇತನ್ ಶರ್ಮಾ ನೇತೃತ್ವದ ಬಿಸಿಸಿಐನ ಹಿರಿಯ ಆಯ್ಕೆ ಸಮಿತಿಯು ತಂಡವನ್ನು ಪ್ರಕಟಿಸಿದ್ದು, ಟೆಸ್ಟ್ ತಂಡದಿಂದ ಅಜಿಂಕ್ಯ ರಹಾನೆ, ಚೇತೇಶ್ವರ ಪೂಜಾರ, ಇಶಾಂತ್ ಶರ್ಮಾ ಹಾಗೂ ವೃದ್ಧಿಮಾಮ್ ಸಹಾರನ್ನು ಕೈಬಿಡಲಾಗಿದೆ.
ಭಾರತ ಪ್ರವಾಸ ಕೈಗೊಂಡಿರುವ ಲಂಕಾ ತಂಡ ಮೂರು ಪಂದ್ಯಗಳ T-20 ಸರಣಿ ಮತ್ತು ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ.
ಮೊದಲ T-20 ಪಂದ್ಯ ಫೆಬ್ರವರಿ 24, ಎರಡನೇ ಪಂದ್ಯ 26 ಮತ್ತು ಮೂರನೇ ಪಂದ್ಯ ಫೆಬ್ರವರಿ 27ರಂದು ನಡೆಯಲಿದೆ. ಈ ಮೂರು ಪಂದ್ಯಗಳು ಧರ್ಮಶಾಲಾದಲ್ಲಿರುವ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆಯಲಿದೆ.
T-20 ಸರಣಿಯ ಬಳಿಕ ಎರಡು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಮೊದಲ ಪಂದ್ಯ ಮೊಹಾಲಿಯಲ್ಲಿ ಮಾರ್ಚ್ 4 ರಿಂದ 8 ರವರೆಗೆ ನಡೆಯಲಿದ್ದು, ಬೆಂಗಳೂರಿನಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಹಗಲು-ರಾತ್ರಿ ಟೆಸ್ಟ್ ಪಂದ್ಯವಾಗಿರಲಿದೆ.
ವಿರಟ್ ಕೊಹ್ಲಿ, ರಿಷಭ್ ಪಂತ್’ಗೆ ವಿಶ್ರಾಂತಿ
ಪ್ರಸ್ತುತ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ T20 ಸರಣಿಯ ಕೊನೆಯ ಪಂದ್ಯಕ್ಕೆ ವಿರಾಟ್ ಕೊಹ್ಲಿ ಹಾಗೂ ಕೀಪರ್ ರಿಷಭ್ ಪಂತ್’ಗೆ ವಿಶ್ರಾಂತಿ ನೀಡಲಾಗಿದೆ. ಶ್ರೀಲಂಕಾ ವಿರುದ್ಧದ T-20 ಸರಣಿಯಿಂದಲೂ ಇಬ್ಬರು ಹೊರಗುಳಿಯಲಿದ್ದಾರೆ. ಆದರೆ ಟೆಸ್ಟ್ ಪಂದ್ಯಗಳಿಗೆ ಮತ್ತೆ ವಾಪಾಸ್ ಆಗಲಿದ್ದಾರೆ.
ತಂಡ ಇಂತಿದೆ:
T-20 ತಂಡ; ರೋಹಿತ್ ಶರ್ಮಾ [ನಾಯಕ], ರಿತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಜಸ್ಪ್ರೀತ್ ಬುಮ್ರಾ (ಉಪನಾಯಕ), ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ರವಿ ಬಿಷ್ಣೋಯ್
ಅವೇಶ್ ಖಾನ್.
ಟೆಸ್ಟ್ ತಂಡ: ರೋಹಿತ್ (ನಾಯಕ), ಮಯಾಂಕ್ ಅಗರ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಪಂತ್, ಗಿಲ್, ಕೆಎಸ್ ಭರತ್, ಅಶ್ವಿನ್, ರವೀಂದ್ರ ಜಡೇಜಾ, ಜಯಂತ್ ಯಾದವ್, ಕುಲದೀಪ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಮುಹಮ್ಮದ್ ಶಮಿ, ಮುಹಮ್ಮದ್ ಸಿರಾಜ್ , ಉಮೇಶ್ ಯಾದವ್, ಸೌರಭ್ ಕುಮಾರ್