ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾಲ್ಡೀವ್ಸ್ ಸಚಿವರು ಮಾಡಿರುವ ನಿಂದನಾರ್ಹ ಹೇಳಿಕೆಯಿಂದ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಿದೆ. ಈ ಮಧ್ಯೆ ಭಾರತದ ವಿದೇಶಾಂಗ ಸಚಿವಾಲಯ ಮಾಲ್ಡೀವ್ಸ್ನ ರಾಯಭಾರಿಗೆ ಸಮನ್ಸ್ ನೀಡಿದೆ.
ಮಾಲ್ಡೀವ್ಸ್ ರಾಯಭಾರಿ ಇಬ್ರಾಹಿಂ ಶಾಹಿಬ್ ದೆಹಲಿಯ ಸೌತ್ ಬ್ಲಾಕ್ನಲ್ಲಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ತೆರಳಿದ್ದಾರೆ. ಮಾಲ್ಡೀವ್ಸ್ ಸರ್ಕಾರ ಇದು ಅವರ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿಕೆ ನೀಡಿದೆ.