ಡಿಸೆಂಬರ್ 15 ರಿಂದ ಅಂತರಾಷ್ಟ್ರೀಯ ವಿಮಾನಯಾನ ಪುನರಾರಂಭ

Prasthutha|

21 ತಿಂಗಳ ಬಳಿಕ ಸಹಜ ಸ್ಥಿತಿಗೆ ಮರಳಲಿರುವ ವಿಮಾನಯಾನ ಸೇವೆ

- Advertisement -

ನವದೆಹಲಿ: ಕೋವಿಡ್ ಕಾರಣದಿಂದಾಗಿ ಸ್ಥಗಿತಗೊಂಡಿದ್ದ ನಿಯಮಿತ ವಾಣಿಜ್ಯ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳನ್ನು ಡಿಸೆಂಬರ್ 15ರಿಂದ ಪುನರಾರಂಭಿಸುವುದಾಗಿ ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ.

ಆದರೆ ಕೋವಿಡ್ ಪ್ರಕರಣಗಳು ಇನ್ನೂ ನಿಯಂತ್ರಣಕ್ಕೆ ಬಾರದ 15 ದೇಶಗಳಿಗೆ ಸದ್ಯ ಇರುವ ನಿರ್ಬಂಧಗಳು ಮುಂದುವರಿಯಲಿದೆ. ನಿಗದಿತ ವಿಮಾನಯಾನ ಸೇವೆಗಳು ರದ್ದಾದ ಬಳಿಕ, ಕಳೆದ ವರ್ಷ ಜುಲೈನಿಂದ 28 ರಾಷ್ಟ್ರಗಳಿಗೆ ‘ವಂದೇ ಭಾರತ್ ಮಿಷನ್’ ಅಡಿಯಲ್ಲಿ ವಿಶೇಷ ಪ್ರಯಾಣಿಕ ವಿಮಾನಗಳ ಹಾರಾಟ ನಡೆಸಲಾಗುತ್ತಿದೆ.

- Advertisement -

ಅಂತರರಾಷ್ಟ್ರೀಯ ನಾಗರಿಕ ವಿಮಾನ ಸೇವೆಗಳನ್ನು ಪುನರಾರಂಭಿಸುವ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಕೇಂದ್ರ ಗೃಹ ಸಚಿವಾಲಯ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಗಳೊಂದಿಗೆ ಸಮಾಲೋಚಿಸಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ವಿಮಾನಯಾನ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಅಂತಾರಾಷ್ಟ್ರೀಯ ವಿಮಾನ ಸೇವೆ ಈ ವರ್ಷಾಂತ್ಯದ ವೇಳೆಗೆ ಸಾಮಾನ್ಯ ಸ್ಥಿತಿಗೆ ಮರಳುವ ನಿರೀಕ್ಷೆಯಿದೆ ಎಂದು ಎರಡು ದಿನಗಳ ಹಿಂದಷ್ಟೇ ನಾಗರಿಕ ವಿಮಾನಯಾನ ಕಾರ್ಯದರ್ಶಿ ರಾಜೀವ್ ಬನ್ಸಾಲ್ ಹೇಳಿದ್ದರು.

Join Whatsapp
Exit mobile version