Home ಕ್ರೀಡೆ ಟಿ-20 ವಿಶ್ವಕಪ್ | ಇಂದು ಭಾರತ – ಪಾಕಿಸ್ತಾನ ಹೈವೋಲ್ಟೇಜ್ ಮ್ಯಾಚ್

ಟಿ-20 ವಿಶ್ವಕಪ್ | ಇಂದು ಭಾರತ – ಪಾಕಿಸ್ತಾನ ಹೈವೋಲ್ಟೇಜ್ ಮ್ಯಾಚ್

ದೆಹಲಿ: ಟಿ- 20 ವಿಶ್ವಕಪ್ ಆರಂಭವಾಗಿದ್ದು ಇಂದು (ಭಾನುವಾರ ,ಅಕ್ಟೋಬರ್ 23) ಭಾರತ ಮತ್ತು ಪಾಕಿಸ್ತಾನ ತಂಡಗಳು ಹಣಾಹಣಿಯಾಗಲಿವೆ.

ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ರಿಷಭ್ ಪಂತ್ ಬದಲಿಗೆ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅನುಭವಿ ವಿಕೆಟ್‌ಕೀಪರ್ ದಿನೇಶ್ ಕಾರ್ತಿಕ್ ಗೆ ಅವಕಾಶ ನೀಡುವ ನಿರೀಕ್ಷೆಯಿದೆ ಎನ್ನಲಾಗಿದೆ.

ಪಂದ್ಯಾಟಕ್ಕೆ ಸಜ್ಜಾಗಿರುವ ಭಾರತ ತಂಡವು ತನ್ನ 11 ಸಂಭಾವ್ಯ ಆಟಗಾರರನ್ನು ತಯಾರಿಗೊಳಿಸಿದೆ. ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ದಿನೇಶ್ ಕಾರ್ತಿಕ್ (WK), ರವಿಚಂದ್ರನ್ ಅಶ್ವಿನ್/ಯುಜುವೇಂದ್ರ ಚಾಹಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ/ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್ ಅವರು ಆಡಲಿದ್ದಾರೆ.

ಸೂಪರ್ 12 ಹಂತದ 3ನೇ ಪಂದ್ಯದಲ್ಲಿ ಭಾರತವು ಪಾಕಿಸ್ತಾನ ತಂಡದೆದುರು ಮುಖಾಮುಖಿಯಾಗಲಿದೆ. ಈ ಪಂದ್ಯವು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ (ಎಂಸಿಜಿ) ನಡೆಯಲಿದೆ. ಭಾರತೀಯ ಕಾಲಮಾನ ಮಧ್ಯಾಹ್ನ 1:30 ರಿಂದ ಪಂದ್ಯ ನಡೆಯಲಿದೆ. ಪಂದ್ಯದ ನೇರ ಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದು.

ಇಂದು ನಡೆಯುವ ಹೈವೋಲ್ಟೇಜ್ ಪಂದ್ಯಾಟಕ್ಕೆ ವೀಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಭಾರತ ತಂಡ ಈವರೆಗೆ ವಿಶ್ವಕಪ್‌ ನಲ್ಲಿ ಕೇವಲ ಒಂದು ಬಾರಿ ಮಾತ್ರ ವಿಶ್ವಕಪ್‌ ನಲ್ಲಿ ಪಾಕಿಸ್ತಾನಕ್ಕೆ ಶರಣಾಗಿದೆ.

Join Whatsapp
Exit mobile version