ನವದೆಹಲಿ: ‘ಇಂಡಿಯಾ’ ಮೈತ್ರಿಕೂಟ ಲೋಕಸಭೆ ಚುನಾವಣೆ ಬಳಿಕ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ನಿರ್ಧರಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಪಕ್ಷದ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಈ ಬಾರಿಯ ಚುನಾವಣೆಯು ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ನಾಶ ಮಾಡಲು ಪ್ರಯತ್ನಿಸುತ್ತಿರುವವರು ಹಾಗೂ ರಕ್ಷಿಸಲು ಹೋರಾಡುತ್ತಿರುವವರ ನಡುವೆ ನಡೆಯಲಿದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ. ‘ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವುದಿಕ್ಕಿಂತಲೂ, ವಾಸ್ತವದಲ್ಲಿ ಸ್ಪರ್ಧೆ ಅತ್ಯಂತ ಪೈಪೋಟಿಯಿಂದ ಕೂಡಿದೆ’ ಎಂದಿರುವ ಅವರು, ಜಯ ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.