ಜಿಂಬಾಬ್ವೆ ವಿರುದ್ಧ ಭಾರತಕ್ಕೆ 100 ರನ್‌ಗಳ ಭಾರೀ ಅಂತರದ ಜಯ

Prasthutha|

ಹರಾರೆ: ಎರಡನೇ ಟಿ20 ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಭಾರತ ಭರ್ಜರಿ ಜಯ ಸಾಧಿಸಿದೆ. ಆರಂಭಿಕ ಅಭಿಷೇಕ್ ಶರ್ಮಾ ಸಿಡಿಸಿದ ಅಬ್ಬರದ ಶತಕದ ನೆರವಿನಿಂದ ಭಾರತ ತಂಡ 100 ರನ್‌ಗಳ ಭಾರೀ ಅಂತರದಿಂದ ಜಿಂಬಾಬ್ವೆ ತಂಡವನ್ನು ಸೋಲಿಸಿ ಟಿ-20 ಸರಣಿಯಲ್ಲಿ 1-1ರಿಂದ ಸಮಬಲ ಸಾಧಿಸಿದೆ.

- Advertisement -

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡ 20 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 234 ರನ್ ಗಳಿಸಿತ್ತು.

ಈ ಬೃಹತ್ ಗುರಿ ಬೆಂಬತ್ತಿದ ಜಿಂಬಾಬ್ವೆ ತಂಡ 18.4 ಓವರ್ ಗಳಲ್ಲಿ 134 ರನ್‌ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಭಾರತ ತಂಡದೆದುರು ಸೋಲೊಪ್ಪಿಕೊಂಡಿದೆ.

- Advertisement -

ಮೊದಲ ಪಂದ್ಯದಲ್ಲಿ ಮಿಂಚಿದ್ದ ಜಿಂಬಾಬ್ವೆ ಬೌಲರ್ ಗಳು ಈ ಪಂದ್ಯದಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದರು.

46 ಎಸೆತಗಳಲ್ಲಿ 100 ರನ್ ಅಭಿಷೇಕ್ ಶರ್ಮಾ

ಸರಣಿಯ ಮೊದಲ ಪಂದ್ಯದಲ್ಲಿ 4 ಎಸೆತಗಳನ್ನು ಎದುರಿಸಿ ಯಾವುದೇ ರನ್ ಕಲೆಹಾಕದೆ ಅಂದರೆ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡಿದ್ದ ಅಭಿಷೇಕ್ ಶರ್ಮಾ, ಎರಡನೇ ಟಿ20 ಪಂದ್ಯದಲ್ಲಿ ಅಬ್ಬರದ ಶತಕ ಸಿಡಿಸಿದ್ದಾರೆ. ಈ ಮೂಲಕ ಅಭಿಷೇಕ್ ಶರ್ಮಾ ತಮ್ಮ ವೃತ್ತಿಜೀವನದ ಎರಡನೇ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಮೊದಲ ಶತಕ ದಾಖಲಿಸಿದ್ದಾರೆ. ಕೇವಲ 46 ಎಸೆತಗಳಲ್ಲಿ 100 ರನ್ ಗಳಿಸಿದ ಅಭಿಷೇಕ್ ತಮ್ಮ ಈ ಅದ್ಭುತ ಇನ್ನಿಂಗ್ಸ್‌ನಲ್ಲಿ ಏಳು ಬೌಂಡರಿ ಮತ್ತು ಎಂಟು ಸಿಕ್ಸರ್‌ಗಳನ್ನು ಹೊಡೆದರು. ಅಲ್ಲದೆ, ಶರ್ಮಾ ಎರಡನೇ ವಿಕೆಟ್‌ಗೆ ಗಾಯಕ್ವಾಡ್ ಅವರೊಂದಿಗೆ 137 ರನ್‌ಗಳ ಜೊತೆಯಾಟವನ್ನು ನಡೆಸಿದರು.ಇದರೊಂದಿಗೆ ಅಭಿಷೇಕ್ ಶರ್ಮಾ ಭಾರತದ ಪರ ಟಿ20 ಅಂತಾರಾಷ್ಟ್ರೀಯ ಶತಕ ಸಿಡಿಸಿದ ನಾಲ್ಕನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

ಋತುರಾಜ್ 47 ಎಸೆತಗಳಲ್ಲಿ 11 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ 77 ರನ್ ಬಾರಿಸಿ ಔಟಾಗದೇ ಉಳಿದರು.

ಮೊದಲ ಪಂದ್ಯದಲ್ಲಿ ವಿಫಲರಾಗಿದ್ದ ರಿಂಕು ಸಿಂಗ್ 22 ಎಸೆತಗಳಲ್ಲಿ 2 ಬೌಂಡರಿ ಮತ್ತು 5 ಸಿಕ್ಸರ್ ಒಳಗೊಂಡ 47 ರನ್ ಬಾರಿಸಿ ಔಟಾಗದೇ ಉಳಿದರು. ಮುರಿಯದ ಮೂರನೇ ವಿಕೆಟ್ ಗೆ 93 ರನ್ ಜೊತೆಯಾಟದಿಂದ ತಂಡದ ಮೊತ್ತ 200ರ ಗಡಿ ದಾಟಿಸಿದರು.

ಮೊದಲ ಪಂದ್ಯದಲ್ಲಿ ಮಿಂಚಿದ್ದ ಜಿಂಬಾಬ್ವೆ ಬೌಲರ್ ಗಳು ಈ ಪಂದ್ಯದಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದರು.ಜಿಂಬಾಬ್ವೆ ವೆಸ್ಲೆ ಮಧರೆರೆ (43), ಬ್ರಿಯಾನ್ ಬೆನೆಟ್ (26) ಲೂಕ್ ಜಾಂಗ್ವೆ (33) ಮಾತ್ರ ಹೋರಾಟ ನಡೆಸಿದರು. ಭಾರತದ ಆವೇಶ್ ಖಾನ್ ಮತ್ತು ಮುಖೇಶ್ ಕುಮಾರ್ ಮಾರಕ ದಾಳಿಗೆ ತತ್ತರಿಸಿದ ಜಿಂಬಾಬ್ವೆ ತಂಡ ಹೋರಾಟ ನಡೆಸಿ ಸೋಲುಂಡಿತು. ಆವೇಶ್ ಖಾನ್ ಮತ್ತು ಮುಖೇಶ್ ಕುಮಾರ್ ತಲಾ 3 ವಿಕೆಟ್ ಪಡೆದರೆ, ರವಿ ಬಿಶ್ನೋಯಿ 2 ವಿಕೆಟ್ ಗಳಿಸಿದರು.

ಶುಭಮನ್ ಗಿಲ್ ನಾಯಕತ್ವದಲ್ಲಿ ಭಾರತ ತಂಡ ಮೊದಲ ಪಂದ್ಯದಲ್ಲಿ ಹೀನಾಯ ಸೋಲನ್ನು ಕಂಡಿತ್ತು.

Join Whatsapp