ಭಾರತದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ: ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಕಳವಳ

Prasthutha|

ವಾಷಿಂಗ್ಟನ್: ಮುಸ್ಲಿಮ್ ವಿರೋಧಿ ಧೋರಣೆ ತಾಳುತ್ತಿರುವ ಮೋದಿ ಸರ್ಕಾರವನ್ನು ಟೀಕಿಸಲು ಹಿಂದೇಟು ಹಾಕುತ್ತಿರುವ ಅಮೆರಿಕ ಅಧ್ಯಕ್ಷರ ನಡೆಯನ್ನು ಸಂಸದೆ ಇಲ್ಹಾನ್ ಉಮರ್ ಪ್ರಶ್ನಿಸಿದ ಬೆನ್ನಲ್ಲೇ, ಭಾರತವು ಮಾನವ ಹಕ್ಕುಗಳ ಉಲ್ಲಂಘನೆಗೆ ಸಾಕ್ಷಿಯಾಗುತ್ತಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕೆನ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

- Advertisement -

ಅಮೆರಿಕ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್, ಭಾರತದ ವಿದೇಶಾಂಗ ಸಚಿವ ಸುಬ್ರಹ್ಮಣ್ಯಂ ಜೈಶಂಕರ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬ್ಲಿಂಕನ್, ‘ಭಾರತದಲ್ಲಿ ಸರ್ಕಾರ, ಪೊಲೀಸ್ ಮತ್ತು ಬಂಧಿಖಾನೆ ಅಧಿಕಾರಿಗಳ ಮೂಲಕ ಕೆಲವರಿಂದ ಮಾನವ ಹಕ್ಕುಗಳ ಉಲ್ಲಂಘನೆ ಸೇರಿದಂತೆ ಇತ್ತೀಚಿನ ಕೆಲವು ಬೆಳವಣಿಗೆಗಳನ್ನು ನಾವು ಗಮನಿಸಿದ್ದೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬ್ಲಿಂಕೆನ್ ಅವರ ಭಾರತದ ವಿರುದ್ಧದ ಆರೋಪಕ್ಕೆ ರಾಜನಾಥ್ ಸಿಂಗ್ ಮತ್ತು ಜೈಶಂಕರ್ ಅವರು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

- Advertisement -

ಇತ್ತೀಚೆಗೆ ಕರ್ನಾಟಕದಲ್ಲಿ ನಡೆದ ಹಿಜಾಬ್ ನಿಷೇಧ, ಹಲಾಲ್ ಮಾಂಸ ನಿಷೇಧ, ಆರ್ಥಿಕ ಜಿಹಾದ್ ವಿವಾದಗಳು ಜಾಗತಿಕ ಮಟ್ಟದಲ್ಲಿಯೂ ಸಾಕಷ್ಟು ಗಮನ ಸೆಳೆದಿತ್ತು.

ಸದ್ಯ ಭಾರತದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿ ನಡೆಸುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಯ ವಿರುದ್ಧ ಅಮೆರಿಕ ಧ್ವನಿ ಎತ್ತಿದೆ.



Join Whatsapp