ಬಾಂಗ್ಲಾದೇಶ ಮಹಿಳಾ ಕ್ರಿಕೆಟ್ ವಿರುದ್ಧದ 5 ಪಂದ್ಯಗಳ ಟಿ 20 ಸರಣಿಯಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಎಲ್ಲಾ ಪಂದ್ಯಗಳನ್ನು ಗೆದ್ದು 0-5 ಅಂತರದ ಗೆಲುವು ಸಾಧಿಸಿದೆ. ಈ ಮೂಲಕ ಆತಿಥೇಯ ತಂಡ ಪ್ರವಾಸಿ ಭಾರತ ತಂಡದ ಎದುರು ಭರ್ಜರಿ ಮುಖಭಂಗ ಅನುಭವಿಸಿದೆ.
ಟಾಸ್ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ನಿಗದಿತ 20 ಒವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 156 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಬಾಂಗ್ಲಾ ತನ್ನ ಪಾಲಿನ ಓವರ್ಗಳು ಮುಕ್ತಾಯಗೊಂಡಾಗ 6 ವಿಕೆಟ್ಗೆ 135 ರನ್ ಬಾರಿಸಿ ಸೋಲೊಪ್ಪಿಕೊಂಡಿತು.
ಭಾರತೀಯ ಬೌಲರ್ಗಳು ನಿಯಮಿತವಾಗಿ ವಿಕೆಟ್ಗಳನ್ನು ಉರುಳಿಸಿದ ಕಾರಣ ಬಾಂಗ್ಲಾದೇಶದ ಬ್ಯಾಟರ್ಗಳಿಗೆ ಚೇತರಿಸಿಕೊಳ್ಳುವುದಕ್ಕೆ ಅವಕಾಶ ಸಿಗಲಿಲ್ಲ. ಇದು ಆತಿಥೇಯರ ಮೇಲೆ ಒತ್ತಡ ಹೇರಿತು.