ಹೊಸದಿಲ್ಲಿ: ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಬಳಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನಗೊಂಡಿದ್ದು, ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ವರದಿಯಾಗಿದೆ.
ಭಿಂಡ್ ನಿಂದ ಸುಮಾರು 6 ಕಿಮೀ ದೂರದಲ್ಲಿರುವ ಮಂಗಾಬಾದ್ ನ ಖಾಲಿ ಮೈದಾನದಲ್ಲಿ ಪತನಗೊಂಡ ವಿಮಾನದ ಅವಶೇಷಗಳು ಛಿದ್ರವಾಗಿ ಬಿದ್ದಿರುವುದು ಕಂಡುಬಂದಿದೆ. ಯುದ್ಧ ವಿಮಾನದ ಒಂದು ಭಾಗ ಭೂಮಿಯಲ್ಲಿ ಸಂಪೂರ್ಣ ಹೂತು ಹೋಗಿದ್ದು, ಅಪಘಾತದ ನಡೆದ ಸ್ಥಳವನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.