ಪುಲ್ವಾಮಾದಲ್ಲಿ ಗುಂಡಿನ ದಾಳಿ; ಯೋಧ ಹುತಾತ್ಮ | ಸೆರೆ ಸಿಕ್ಕ ಉಗ್ರರ ವಿರುದ್ಧ ಮುಂದುವರಿದ ಕಾರ್ಯಾಚರಣೆ

Prasthutha: July 2, 2021

ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯ ಹಂಜಿನ್ ರಾಜ್ ಪೊರಾ ಪ್ರದೇಶದಲ್ಲಿ ಭದ್ರತಾ ಪಡೆ ಯೋಧರು ಮತ್ತು ಉಗ್ರಗಾಮಿಗಳ ನಡುವೆ ಗುಂಡಿನ ಚಕಮಕಿ ನಡೆದು ಯೋಧರೊಬ್ಬರು ಹುತಾತ್ಮಗೊಂಡಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

ಉಗ್ರರ ಇರುವಿಕೆ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯ ನಡೆಸಲು ಆರಂಭಿಸಿದರು. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ಮಳೆಗೈಯಲು ಆರಂಭಿಸಿದರು. ಪೊಲೀಸರು ಮತ್ತು ಸೇನಾಪಡೆ ಜಂಟಿಯಾಗಿ ಇಂದು ಬೆಳಗ್ಗೆ ಕಾರ್ಯಾಚರಣೆ ಆರಂಭಿಸಿತ್ತು.

ಉಗ್ರರ ಇರುವಿಕೆ ಬಗ್ಗೆ ಖಚಿತವಾಗಿ ಮಾಹಿತಿ ಪಡೆದ ಪೊಲೀಸರು ಉಗ್ರರನ್ನು ಶರಣಾಗುವಂತೆ ಕೇಳಿಕೊಂಡರೂ ಒಪ್ಪದೆ ದಾಳಿ ನಡೆಸಿದಾಗ ಎನ್ ಕೌಂಟರ್ ಏರ್ಪಟ್ಟಿತು. ನಾಲ್ಕು ಮಂದಿ ಉಗ್ರರು ಸಿಕ್ಕಿಹಾಕಿಕೊಂಡಿದ್ದು, ಇನ್ನೂ ಕಾರ್ಯಾಚರಣೆ ಮುಂದುವರಿದಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ