Home ಟಾಪ್ ಸುದ್ದಿಗಳು ನಿಗೂಢವಾಗಿ ನಾಪತ್ತೆಯಾಗಿದ್ದ ಭಾರತೀಯ ಸೇನೆಯ ಯೋಧ ವಾರದ ಬಳಿಕ ಪತ್ತೆ

ನಿಗೂಢವಾಗಿ ನಾಪತ್ತೆಯಾಗಿದ್ದ ಭಾರತೀಯ ಸೇನೆಯ ಯೋಧ ವಾರದ ಬಳಿಕ ಪತ್ತೆ

ಶ್ರೀನಗರ: ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದಿಂದ ನಾಪತ್ತೆಯಾಗಿದ್ದ ಭಾರತೀಯ ಸೇನಾ ಯೋಧನನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ನಿಗೂಢವಾಗಿ ನಾಪತ್ತೆಯಾಗಿ ಸುಮಾರು ಒಂದು ವಾರದ ಬಳಿಕ ಪ್ರಕರಣಕ್ಕೆ ಪೊಲೀಸರು ಅಂತ್ಯ ಹಾಡಿದ್ದಾರೆ.

ನಾಪತ್ತೆಯಾಗಿದ್ದ ಸೇನಾ ಯೋಧನನ್ನು ಕುಲ್ಗಾಮ್ ಪೊಲೀಸರು ವಶಪಡಿಸಿಕೊಂಡಿದ್ದಾರೆ. ವೈದ್ಯಕೀಯ ತಪಾಸಣೆಯ ನಂತರ ಜಂಟಿ ವಿಚಾರಣೆ ಆರಂಭವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯೋಧನ ನಾಪತ್ತೆ ಪ್ರಕರಣದ ಬಗ್ಗೆ ಪೊಲೀಸರು ಈ ಹಿಂದೆ ಯಾವುದೇ ವಿವರಗಳನ್ನು ಬಹಿರಂಗಪಡಿಸಿರಲಿಲ್ಲ. ಆದರೂ ಅವರ ಅಪಹರಣ ನಡೆದಿರಬಹುದು ಎಂಬ ಆತಂಕವಿತ್ತು. ಯೋಧನ ಹುಡುಕಾಟ ನಡೆಸುವಂತೆ ಈ ಹಿಂದೆ ಆತನ ಕುಟುಂಬ ಕೇಂದ್ರಕ್ಕೆ ಮನವಿ ಮಾಡಿತ್ತು.

ಲಡಾಖ್‍ನಲ್ಲಿ ನಿಯೋಜನೆಗೊಂಡಿದ್ದ ಜಾವೆದ್ ಅಹ್ಮದ್ ವಾನಿ (25) ಅವರು ರಜೆ ಮೇಲೆ ಮನೆಗೆ ತೆರಳಿದ್ದರು. ಈ ವೇಳೆ ಅವರು ಕಳೆದ ಜು.29ರ ಸಂಜೆ ಮನೆಯಿಂದ ಅಂಗಡಿಯೊಂದಕ್ಕೆ ತೆರಳಿದ್ದರು. ಬಳಿಕ ನಿಗೂಢವಾಗಿ ಕುಲ್ಗಾಮ್‍ನಿಂದ ಅವರು ನಾಪತ್ತೆಯಾಗಿದ್ದರು. ಅಲ್ಲದೇ ಕಾರಿನಲ್ಲಿ ಅವರ ಚಪ್ಪಲಿ ಹಾಗೂ ರಕ್ತದ ಕಲೆಗಳು ಪತ್ತೆಯಾಗಿತ್ತು ಇದರಿಂದ ಇನ್ನೂ ಆತಂಕ ಹೆಚ್ಚಾಗಿತ್ತು. ಅಲ್ಲದೇ ಅವರ ಅಪಹರಣ ನಡೆದಿರಬಹುದು ಎಂದು ಶಂಕಿಸಲಾಗಿತ್ತು.

Join Whatsapp
Exit mobile version