ಭಾರತ ಮೂಲದ ಉದ್ಯಮಿ ಪ್ರಕಾಶ್‌ ಹಿಂದುಜಾ ಮತ್ತು ಕುಟುಂಬದ ನಾಲ್ವರಿಗೆ ನಾಲ್ಕೂವರೆ ವರ್ಷ ಜೈಲು ಶಿಕ್ಷೆ

Prasthutha|

ಜೆನೀವಾ:‌ ವಿಶ್ವದ ಶ್ರೀಮಂತ ಕುಟುಂಬಗಳಲ್ಲಿ ಒಂದಾದ, ಭಾರತ ಮೂಲದ ಉದ್ಯಮಿ ಪ್ರಕಾಶ್‌ ಹಿಂದುಜಾ ಮತ್ತು ಅವರ ಕುಟುಂಬದ ನಾಲ್ವರಿಗೆ ಸ್ವಿಟ್ಜರ್‌ಲ್ಯಾಂಡ್‌ ನ್ಯಾಯಾಲಯ ನಾಲ್ಕೂವರೆ ವರ್ಷ ಜೈಲು ಶಿಕ್ಷೆ ವಿಧಿಸಿದೆ.

- Advertisement -

ಹಿಂದುಜಾ ಕುಟುಂಬದ ಉದ್ಯಮಿ ಪ್ರಕಾಶ್‌ ಹಿಂದುಜಾ, ಅವರ ಪತ್ನಿ ಕಮಲ್, ಮಗ ಅಜಯ್ ಹಾಗೂ ಸೊಸೆ ನಮ್ರತಾ ಅವರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಪ್ರಕರಣದಲ್ಲಿ ಐದನೇ ಆರೋಪಿಯಾಗಿದ್ದ, ಹಿಂದುಜಾ ಕುಟುಂಬದ ಮ್ಯಾನೇಜರ್‌ ನಜೀಬ್‌ ಜಿಯಾಜಿಗೆ 18 ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ. ಸ್ವಿಟ್ಜರ್‌ಲ್ಯಾಂಡ್‌ನ ಕಾರ್ಮಿಕ ಕಾನೂನು ಉಲ್ಲಂಘನೆ, ಮಾನವ ಕಳ್ಳಸಾಗಣೆ, ಮನೆಗೆಲಸದವರ ಮೇಲೆ ದೌರ್ಜನ್ಯ ಸೇರಿ ಹಲವು ಪ್ರಕರಣಗಳಲ್ಲಿ ನಾಲ್ವರನ್ನೂ ದೋಷಿಗಳು ಎಂದು ಕೋರ್ಟ್‌ ತೀರ್ಪು ನೀಡಿ, ಶಿಕ್ಷೆ ವಿಧಿಸಿದೆ.

ಹಿಂದುಜಾ ಕುಟುಂಬವು ಸ್ವಿಟ್ಜರ್‌ಲ್ಯಾಂಡ್‌ನ ಜಿನೀವಾದಲ್ಲಿರುವ ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ಮಹಿಳೆಯೊಬ್ಬಳಿಗೆ ಕಡಿಮೆ ಸಂಬಳ ನೀಡಿದ್ದಾರೆ. ಆಕೆಯನ್ನು ವಾರದಲ್ಲಿ ಏಳು ದಿನಗಳ ಕಾಲ ಹಾಗೂ ಪ್ರತಿದಿನ 18 ಗಂಟೆಕಾಲ ಕೆಲಸ ಮಾಡಿದ್ದಕ್ಕೆ ಕೇವಲ ಏಳು ಸ್ವಿಸ್, ಅಂದರೆ ದಿನಕ್ಕೆ 650 ರೂ. ಸಂಬಳ ನೀಡಿದ್ದಾರೆ. ಆದರೆ ಅವರು ಮನೆಯಲ್ಲಿ ಸಾಕಿದ ನಾಯಿಗೆ ಮಾತ್ರ ವಾರ್ಷಿಕವಾಗಿ 8,584 ಸ್ವಿಸ್ (ಸುಮಾರು 8 ಲಕ್ಷ ರೂ.) ಖರ್ಚು ಮಾಡುತ್ತಾರೆ. ಹಾಗಾಗಿ ಹಿಂದುಜಾ ಕುಟುಂಬದವರು ತಮ್ಮ ಸೇವಕರಿಗಿಂತ ಸಾಕು ನಾಯಿಗಳಿಗೆ ಹೆಚ್ಚು ಖರ್ಚು ಮಾಡುತ್ತಾರೆ ಎಂದು ಮಹಿಳೆಯು ಕೋರ್ಟ್‌ ಮೊರೆ ಹೋಗಿದ್ದರು. ಅಲ್ಲದೆ, ಹಿಂದುಜಾ ಕುಟುಂಬದವರು ಪಾಸ್‌ಪೋರ್ಟ್ ಕಿತ್ತುಕೊಂಡು ಅನುಮತಿಯಿಲ್ಲದೆ ಮನೆಯಿಂದ ಹೊರಬರದಂತೆ ನಿರ್ಬಂಧ ಹೇರಿದೆ. ಕೆಲಸದವರಿಗೆ ರಜೆ ಕೂಡ ನೀಡುತ್ತಿರಲಿಲ್ಲ. ಅಲ್ಲದೆ, ಕರೆನ್ಸಿಯಲ್ಲಿ ಸಂಬಳ ನೀಡುತ್ತಿದ್ದ ಕಾರಣ ಅವರಿಗೆ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಖರ್ಚು ಮಾಡಲು ಹಣವಿರುತ್ತಿರಲಿಲ್ಲ ಎಂದು ಸ್ವಿಟ್ಜರ್‌ಲ್ಯಾಂಡ್ ನ್ಯಾಯಾಲಯದ ಸರ್ಕಾರಿ ವಕೀಲ ಯವೆಸ್ ಬರ್ಟೋಸಾ ವಾದ ಮಂಡಿಸಿದ್ದರು.

- Advertisement -

ಭಾರತ ಮೂಲದ ಗೋಪಿಚಂದ್‌ ಹಿಂದುಜಾ ಹಾಗೂ ಅವರ ಕುಟುಂಬ ಬ್ರಿಟನ್‌ನ ಶ್ರೀಮಂತ ಕುಟುಂಬ ಅಥವಾ ಉದ್ಯಮಿ ಎಂಬ ಖ್ಯಾತಿಗೆ ಭಾಜನವಾಗಿದೆ. ಸತತ ಮೂರನೇ ವರ್ಷವೂ ಹಿಂದುಜಾ ಕುಟುಂಬವೇ ಅತ್ಯಂತ ಶ್ರೀಮಂತ ಎಂಬ ಖ್ಯಾತಿಗೆ ಪಾತ್ರವಾಗಿದೆ.

ಸಂಡೇ ಟೈಮ್ಸ್‌ ರಿಚ್‌ ಲಿಸ್ಟ್‌’ ಬಿಡುಗಡೆ ಮಾಡಿದ ಪಟ್ಟಿ ಪ್ರಕಾರ, ಗೋಪಿಚಂದ್‌ ಹಿಂದುಜಾ ಬ್ರಿಟನ್‌ನ ಶ್ರೀಮಂತ ಉದ್ಯಮಿ ಎನಿಸಿದ್ದಾರೆ. ಇವರ ಆಸ್ತಿಯ ಒಟ್ಟು ಮೌಲ್ಯವು 37 ಶತಕೋಟಿ ಪೌಂಡ್ಸ್‌ (ಸುಮಾರು 3.9 ಲಕ್ಷ ಕೋಟಿ ರೂ.) ಇದೆ.



Join Whatsapp