ಗುಜರಾತ್ | ಭಾರತೀಯ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ: ಮೂವರು ಸಿಬ್ಬಂದಿ ನಾಪತ್ತೆ

Prasthutha|

ಗಾಂಧಿನಗರ: ಭಾರತೀಯ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಗುಜರಾತ್ ಸಮುದ್ರದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಅದರಲ್ಲಿದ್ದ ಇಬ್ಬರು ಪೈಲಟ್ ಗಳು ಸೇರಿ ಮೂವರು ನಾಪತ್ತೆಯಾಗಿದ್ದಾರೆ.

- Advertisement -


ಓರ್ವ ಸಿಬ್ಬಂದಿಯನ್ನು ರಕ್ಷಿಸಲಾಗಿದ್ದು, ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕೋಸ್ಟ್ ಗಾರ್ಡ್ನ ನಾಲ್ಕು ಹಡಗುಗಳು ಮತ್ತು ಎರಡು ವಿಮಾನಗಳ ಮುಲಕ ನಾಪತ್ತೆಯಾದ ಸಿಬ್ಬಂದಿಯನ್ನು ಹುಡುಕಾಟ ನಡೆಸಲಾಗುತ್ತಿದೆ.


ಹೆಲಿಕಾಪ್ಟರ್ ನ ಅವಶೇಷಗಳು ಪತ್ತೆಯಾಗಿದ್ದು, ಸಿಬ್ಬಂದಿಯ ಬಗ್ಗೆ ಯಾವುದೇ ಸುಳಿವು ಇನ್ನೂ ಸಿಕ್ಕಿಲ್ಲ. ಹೆಲಿಕಾಪ್ಟರ್ ತುರ್ತು ಭೂಸ್ಪರ್ಶಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



Join Whatsapp