ರಷ್ಯಾ – ಉಕ್ರೇನ್ ಸಂಘರ್ಷ: ಉಕ್ರೇನ್’ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ತಾತ್ಕಾಲಿಕ ಪೋಲೆಂಡ್’ಗೆ ಸ್ಥಳಾಂತರ

Prasthutha|

ಕೀವ್: ರಷ್ಯಾ – ಉಕ್ರೇನ್ ಸಂಘರ್ಷದ ಮಧ್ಯೆ ಉಕ್ರೇನ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯನ್ನು ತಾತ್ಕಾಲಿಕವಾಗಿ ಪೋಲೆಂಡ್’ಗೆ ಸ್ಥಳಾಂತರಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಭಾನುವಾರು ತಿಳಿಸಿದೆ.

- Advertisement -

ಉಕ್ರೇನ್’ನ ಪಶ್ಚಿಮ ಭಾಗದಲ್ಲಿರುವ ದಾಳಿ ಸೇರಿದಂತೆ ಭದ್ರತಾ ಪರಿಸ್ಥಿತಿಯನ್ನು ಅವಲೋಕಿಸಿಕೊಂಡು ಭಾರತೀಯ ರಾಯಭಾರಿ ಕಚೇರಿಯನ್ನು ತಾತ್ಕಾಲಿಕವಾಗಿ ಪೋಲೆಂಡ್’ಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ ಎಂದು ಸಚಿವಾಲಯ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿದೆ.

ಮಾತ್ರವಲ್ಲ ಮುಂದಿನ ಬೆಳವಣಿಗೆ ಮತ್ತು ಪರಿಸ್ಥಿತಿಯನ್ನು ಕೂಲಂಕುಷವಾಗಿ ಅವಲೋಕನ ಮಾಡಲಾಗುತ್ತದೆ ಎಂದು ವಿದೇಶಾಂಗ ಸಚಿವಾಲಯ ಅಭಿಪ್ರಾಯಪಟ್ಟಿದೆ.

- Advertisement -

ಈ ಮಧ್ಯೆ ಭಾರತದ ಭದ್ರತಾ ಸನ್ನದ್ಧತೆ ಮತ್ತು ಉಕ್ರೇನ್ ನಲ್ಲಿ ನಡೆಯುತ್ತಿರುವ ವಿದ್ಯಾಮಾನಗಳ ಕುರಿತು ಪರಿಶೀಲಿಸಲು ಪ್ರಧಾನಿ ಮೋದಿ ನೇತೃತ್ವದ CCS ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ವೇಳೆ ಖಾರ್ಕಿವ್ ನಲ್ಲಿ ಕ್ಷಿಪಣಿ ದಾಳಿಗೊಳಗಾಗಿ ಸಾವನ್ನಪ್ಪಿದ ನವೀನ್ ಶೇಖರಪ್ಪ ಎಂಬಾತನ ಪಾರ್ಥೀವ ಶರೀರವನ್ನು ಭಾರತಕ್ಕೆ ಮರಳಿ ತರಲು ಸಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ನಿರ್ವಹಿಸುವಂತೆ ಅವರು ಸೂಚಿಸಿದ್ದಾರೆ ಎಂದು ಹೇಳಲಾಗಿದೆ.

Join Whatsapp