ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷ ಡೆನ್ನಿಸ್ ಫ್ರಾನ್ಸಿಸ್ ನಾಳೆ ಭಾರತಕ್ಕೆ

Prasthutha|

ವಾಷಿಂಗ್ಟನ್: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷ ಡೆನ್ನಿಸ್ ಫ್ರಾನ್ಸಿಸ್ ನಾಳೆ ಭಾರತಕ್ಕೆ ಆಗಮಿಸಲಿದ್ದಾರೆ.

- Advertisement -

ಜನವರಿ 22 ರಿಂದ 26 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಲಿದ್ದು, ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ಭೇಟಿ ಮಾಡಲಿದ್ದಾರೆ. ಜೈಪುರ ಮತ್ತು ಮುಂಬೈಗೂ ಭೇಟಿ ನೀಡಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಐದು ದಿನಗಳ ಪ್ರವಾಸದಲ್ಲಿ ಭೌಗೋಳಿಕ ರಾಜಕೀಯ ಒತ್ತಡಗಳು, ವಿಶ್ವಸಂಸ್ಥೆಗೆ ಭಾರತದ ಕೊಡುಗೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಭಾರತದೊಂದಿಗೆ ಚರ್ಚೆ ಅವರು ನಡೆಸಲಿದ್ದಾರೆ. ಅಲ್ಲದೆ ಹಲವು ವಿಚಾರಗಳಿಗೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

- Advertisement -

2024ರ ಏಪ್ರಿಲ್ 15-19ರವರೆಗೆ ನ್ಯೂಯಾರ್ಕ್‌ನಲ್ಲಿ ನಡೆಯಲಿರುವ ಸಾಮಾನ್ಯ ಸಭೆಗೂ ಇದೇ ವೇಳೆ ಭಾರತಕ್ಕೆ ಆಹ್ವಾನ ನೀಡಲಿದ್ದಾರೆ.



Join Whatsapp