ಭಾರತೀಯ ಫುಟ್ಬಾಲ್ ತಂಡದ ಮುಖ್ಯ ಕೋಚ್ ಇಗೊರ್ ಸ್ಟಿಮಾಕ್ ವಜಾ

Prasthutha|

ನವದೆಹಲಿ: ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ (AIFF) ಭಾರತೀಯ ಫುಟ್ಬಾಲ್ ತಂಡದ ಮುಖ್ಯ ಕೋಚ್ ಇಗೊರ್ ಸ್ಟಿಮಾಕ್ ಅವರನ್ನು ವಜಾಗೊಳಿಸಲು ನಿರ್ಧರಿಸಲಾಗಿದೆ.

- Advertisement -

ಫಿಫಾ ವಿಶ್ವಕಪ್ 2026ರ ಅರ್ಹತಾ ಸುತ್ತಿನ 3ನೇ ಸುತ್ತಿಗೆ ಅರ್ಹತೆ ಪಡೆಯಲು ರಾಷ್ಟ್ರೀಯ ತಂಡ ವಿಫಲವಾದ ನಂತರ ಈ ಕ್ರಮ ಅವರು ಎದುರಿಸಬೇಕಾಗಿದೆ.

ಕತಾರ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಭಾರತ 2-1 ಗೋಲುಗಳಿಂದ ಸೋಲನುಭವಿಸಿದ್ದು, ಇದರ ಪರಿಣಾಮವಾಗಿ ರಾಷ್ಟ್ರೀಯ ತಂಡವು ಕುವೈತ್ ಮತ್ತು ಅಫ್ಘಾನಿಸ್ತಾನವನ್ನ ಒಳಗೊಂಡ ಗುಂಪಿನಲ್ಲಿ ಮೂರನೇ ಸ್ಥಾನ ಪಡೆಯಿತು. ಕುವೈತ್ ವಿರುದ್ಧದ ಕೊನೆಯ ಪಂದ್ಯದ ನಂತರ ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಫುಟ್ಬಾಲ್‌ನಿಂದ ನಿವೃತ್ತರಾದ ಕೆಲವೇ ವಾರಗಳ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹಿರಿಯ ಅಧಿಕಾರಿಗಳು ವರ್ಚುವಲ್ ಸಭೆ ನಡೆಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಎಐಎಫ್‌ಎಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Join Whatsapp
Exit mobile version