ಭಾರತೀಯ ಮುಸ್ಲಿಮರು ವಕ್ಫ್ ತಿದ್ದುಪಡಿ ಮಸೂದೆಯನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ: ಅಪ್ಸರ್ ಕೊಡ್ಲಿಪೇಟೆ

- Advertisement -

ಅರಸೀಕೆರೆ: ಸೋಷಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಅರಸೀಕೆರೆ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ SMJ ಸಮುದಾಯ ಭವನದಲ್ಲಿ ಆಯೋಜಿಸಿದ್ದ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಅಭಿಯಾನದ ಅಂಗವಾಗಿ ಜನ ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

- Advertisement -


ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎಸ್ ಡಿ ಪಿ ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಆಫ್ಸರ್ ಕೊಡ್ಲಿಪೇಟೆ, ಬಿಜೆಪಿ ನೇತೃತ್ವದ NDA ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ವಕ್ಫ್ ತಿದ್ದುಪಡಿ ಮಸೂದೆ 2024 ರಲ್ಲಿರುವ ಮಾರಕ ಅಂಶಗಳು ಯಾವುವು?, ಇದರ ಹಿಂದಿ ಅಡಗಿರುವ ಶಡ್ಯಂತರ ಏನು? ಇದನ್ನು ವಿರೋಧಿಸುವ ವಿಧಾನ ಹೇಗೆ.? ಮತ್ತು ಮಸೂದೆಯನ್ನು ತಿರಸ್ಕಾರ ಮಾಡಲು ಮುಸ್ಲಿಮರಿಗೆ ಮುಂದಿರುವ ಮಾರ್ಗೋಪಾಯಗಳು ಯಾವುವು ? ಎಂಬ ವಿಷಯದ ಬಗ್ಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಗರದ ಸಮುದಾಯದ ನೇತಾರರು, ಧಾರ್ಮಿಕ ಗುರುಗಳು, ಸಾಮಾಜಿಕ ಚಿಂತಕರು ಹಾಗೂ ವಿವಿಧ ಪಕ್ಷಗಳ ಮುಖಂಡರುಗಳೊಂದಿಗೆ ಸಂವಾದ ನಡೆಸಿದರು.


ಸಭೆಯನ್ನು ಉದ್ದೇಶಿಸಿ ಮಾತನಾಡಿದ ಆಫ್ಸರ್ ಕೊಡ್ಲಿಪೇಟೆ “ವಕ್ಫ್ ತಿದ್ದುಪಡಿ ಮಸೂದೆ ಭಾರತದ ಧರ್ಮನಿರಪೇಕ್ಷ ಮತ್ತು ಪ್ರಜಾಪ್ರಭುತ್ವ ಸಿದ್ಧಾಂತಗಳ ವಿರುದ್ಧವಾಗಿದೆ. ಇದು ಭಾರತದ ಸಂವಿಧಾನದ 12 ರಿಂದ 35ನೇ ವಿಧಿಗಳಲ್ಲಿ ನಿರ್ದಿಷ್ಟಗೊಳಿಸಿರುವ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಈ ಮಸೂದೆ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 25 ಕೋಟಿ ನಾಗರಿಕರ ಭಾವನೆಗಳಿಗೆ ತೀವ್ರ ಹಾನಿ ಉಂಟುಮಾಡುತ್ತದೆ” ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಮತ್ತು ಎಸ್ಡಿಪಿಐ ಪಕ್ಷ ಹಲವಾರು ಬಾರಿ ಸ್ಪಷ್ಟಪಡಿಸಿರುವಂತೆ,ಭಾರತೀಯ ಮುಸ್ಲಿಮರು ವಕ್ಫ್ ತಿದ್ದುಪಡಿ ಮಸೂದೆ 2024 ಅನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ.

- Advertisement -


“ಎಸ್ಡಿಪಿಐ ರಾಷ್ಟ್ರೀಯ ಅಧ್ಯಕ್ಷರ ಬಂಧನ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ದೇಶಾದ್ಯಂತ ನಡೆಯುತ್ತಿರುವ ಆಂದೋಲನವನ್ನು ಹಿಮ್ಮೆಟ್ಟಿಸುವ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರ್ಕಾರದ ಷಡ್ಯಂತ್ರದ ಭಾಗವಾಗಿದೆ. ಬಿಜೆಪಿ ನೇತೃತ್ವದ NDA ಸರಕಾರ ED, NIA ಮೂಲಕ ನಮ್ಮನ್ನು ಈ ಹೋರಾಟದಿಂದ ಒಂದು ಇಂಚನ್ನು ಸಹ ಹಿಂದೆ ಸರಿಸಲು ಸಾಧ್ಯವಿಲ್ಲ.ನಮ್ಮ ಹೋರಾಟ ಇನ್ನಷ್ಟು ಬಲಗೊಳ್ಳಲಿದೆ.
SDPI ಈ ರೀತಿಯ ದಬ್ಬಾಳಿಕೆಯ ಹಾಗೂ ಪ್ರಜಾಪ್ರಭುತ್ವವಿರೋಧಿ ನಡೆಗಳ ವಿರುದ್ಧ ತನ್ನ ಸಂಪೂರ್ಣ ಶಕ್ತಿ ಮತ್ತು ದೃಢ ಸಂಕಲ್ಪದೊಂದಿಗೆ ಹೋರಾಟವನ್ನು ಮುಂದುವರಿಸಲಿದ್ದು, ಸಮುದಾಯದ ಎಲ್ಲಾ ಸಂಘಟನೆಗಳ ಮತ್ತು ರಾಜಕೀಯ ಪಕ್ಷಗಳ ನಾಯಕರು ಒಗಟ್ಟಿನೊಂದಿಗೆ ಈ ಹೋರಾಟವನ್ನು ಮುನ್ನಡೆಸಬೇಕಿದೆ” ಎಂದು ಕರೆ ನೀಡಿದರು.


ವೇದಿಕೆಯಲ್ಲಿ ಹಾಸನ ಜಿಲ್ಲಾಧ್ಯಕ್ಷರಾದ ಇಮ್ರಾನ್ ಅರೇಹಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನದೀಂ ಜಾಮೀಯಾ ಮಸೀದಿ ಉಪಾಧ್ಯಕ್ಷರಾದ ರಿಯಾಜ್ ಅವರು ಹಾಗೂ ಇಸ್ಲಾಮಿಯ ಬೈತುಲ್ ಮಾಲ್ ಕಮೇಟಿಯ ಅಧ್ಯಕ್ಷರಾದ KK ಹಬೀಬ್ ರವರು ಮತ್ತು ಮುಜಾವರ್ ಮೊಹಲದ ನೂರುಲ್ ಉದಾ ಮಸೀದಿಯ ಅಧ್ಯಕ್ಷರಾದ ಬಸೀದ್ ಅವರು ಮತ್ತು ಅರಸೀಕೆರೆಯ ಮರ್ಕಸ್ ಉಸ್ಮಾನ್ ಬಿನ್ ಅಫಾನ್ ಮಸೀದಿಯಾ ಅಧ್ಯಕ್ಷರಾದ ಬಕಶ್ ರವರು
ಉಪಸ್ಥಿತರಿದ್ದರು.
ತಾಲೂಕು ಅಧ್ಯಕ್ಷರಾದ ಅಜ್ಗರ್ ರವರು ಪ್ರಸ್ತಾವಿಕವಾಗಿ ಮಾತನಾಡಿದರೆ ನದೀಂ ರವರು ಸ್ವಾಗತಿಸಿ ಯಾಸೀನ್ ರವರು ವಂದಿಸಿದರು.

- Advertisement -


Must Read

Related Articles