ಕಠ್ಮಂಡು: ಭಾರತದ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ನೇಪಾಳದಲ್ಲಿ ನಡೆದಿದೆ.
‘ದಕ್ಷಿಣ ಭಾಗದ ನೇಪಾಳದಲ್ಲಿ ಐವರು ಅನಾಮಧೇಯ ಬಂದೂಕುಧಾರಿಗಳು ಭಾರತದ ವ್ಯಕ್ತಿಯೊಬ್ಬರನ್ನು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಬಂದೂಕುಧಾರಿಗಳ ಗುಂಡಿಗೆ ಬಲಿಯಾದ ವ್ಯಕ್ತಿಯನ್ನು 45 ವರ್ಷದ ಶಿವ ಪೂಜನ್ ಯಾದವ್ ಎಂದು ಗುರುತಿಸಲಾಗಿದೆ. ಎರಡು ಬೈಕ್ಗಳಲ್ಲಿ ಬಂದ ಐವರು ಬಂದೂಕುಧಾರಿ ವ್ಯಕ್ತಿಗಳು ಯಾದವ್ ಅವರ ಮೇಲೆ ಗುಂಡು ಹಾರಿಸಿದ್ದಾರೆ. ಇದರ ಪರಿಣಾಮ ಯಾದವ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣದಲ್ಲಿ ಯಾದವ್ ಅವರನ್ನು ಹತ್ತಿರ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಚಿಕಿತ್ಸೆ ನೀಡುತ್ತಿದ್ದ ಸಂದರ್ಭದಲ್ಲೇ ಯಾದವ್ ಅವರು ಸಾವಿಗೀಡಾದರು. ತನಿಖೆ ಪ್ರಗತಿಯಲ್ಲಿದೆ. ಅನುಮಾನ ಬಂದ ವ್ಯಕ್ತಿಯೊಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.