ಭಾರತದ ಪ್ರಧಾನಿ ವಿಶ್ವದ ಅತ್ಯಂತ ರಕ್ತಸಿಕ್ತ ಕ್ರಿಮಿನಲ್‌ನನ್ನು ಆಲಂಗಿಸಿದ್ದಾರೆ: ಝೆಲೆನ್ಸ್ಕಿ

Prasthutha|

ಉಕ್ರೇನ್: ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭೇಟಿಯ ಕುರಿತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -

ಉಕ್ರೇನ್‌ನ ಅತಿದೊಡ್ಡ ಮಕ್ಕಳ ಆಸ್ಪತ್ರೆ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆಸಿರುವ ಬೆನ್ನಲ್ಲೇ ಎಕ್ಸ್‌ನಲ್ಲಿ ಫೋಟೋಗಳನ್ನು ಹಂಚಿಕೊಂಡಿರುವ ಝೆಲೆನ್‌ಸ್ಕಿ, ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವದ ನಾಯಕ, ವಿಶ್ವದ ಅತ್ಯಂತ ರಕ್ತಸಿಕ್ತ ಕ್ರಿಮಿನಲ್‌ನನ್ನು ಆಲಂಗಿಸಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ನಾಯಕ ವಿಶ್ವದ ಅತ್ಯಂತ ರಕ್ತಸಿಕ್ತ ಕ್ರಿಮಿನಲ್‌ನನ್ನು ತಬ್ಬಿಕೊಳ್ಳುವುದನ್ನು ನೋಡುವುದು ಶಾಂತಿಯ ಪ್ರಯತ್ನಗಳಿಗೆ ಭಾರೀ ನಿರಾಶೆ ಮತ್ತು ವಿನಾಶಕಾರಿ ಹೊಡೆತವಾಗಿದೆ ಎಂದು ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.

- Advertisement -

ರಷ್ಯಾದ ಕ್ರೂರ ಕ್ಷಿಪಣಿ ದಾಳಿಯಿಂದ ಉಕ್ರೇನ್‌ನಲ್ಲಿ ಮೂರು ಮಕ್ಕಳು 37 ಜನರು ಸಾವನ್ನಪ್ಪಿದ್ದಾರೆ. 13 ಮಕ್ಕಳು ಸೇರಿದಂತೆ 170 ಜನರು ಗಾಯಗೊಂಡಿದ್ದಾರೆ. ಯುವ ಕ್ಯಾನ್ಸರ್‌ ರೋಗಿಗಳನ್ನು ಗುರಿಯಾಗಿಸಿಕೊಂಡು ಮಕ್ಕಳ ಆಸ್ಪತ್ರೆ ಮೇಲೂ ರಷ್ಯಾ ದಾಳಿ ನಡೆಸಿದೆ. ಎಷ್ಟೋ ಮಕ್ಕಳು ಅವಶೇಷಗಳಡಿ ಹೂತು ಹೋಗಿದ್ದಾರೆ ಎಂದು ವೊಲೊಡಿಮಿರ್ ಝೆಲೆನ್ಸ್ಕಿ ಮಾಹಿತಿ ನೀಡಿದ್ದಾರೆ.

ಎರಡು ದಿನಗಳ ರಷ್ಯಾ ಭೇಟಿಗಾಗಿ ಸೋಮಾವಾರ ಮಾಸ್ಕೋಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ, ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಿದ್ದು, ಈ ಭೇಟಿಯನ್ನು ಯುಎಸ್‌ ಕೂಡ ವಿರೋಧಿಸಿದೆ. ಯುಎಸ್‌ ಗೃಹ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್, ರಷ್ಯಾದೊಂದಿಗಿನ ಭಾರತದ ಸಂಬಂಧದ ಕುರಿತು ಯುಎಸ್‌ ಈಗಾಗಲೇ ಕಳವಳ ವ್ಯಕ್ತಪಡಿಸಿದೆ ಎಂದಿದ್ದಾರೆ.

Join Whatsapp