ಬೆಂಗಳೂರು: ಆಂಧ್ರಪ್ರದೇಶದ ಅಥ್ಲೀಟ್ ಜ್ಯೋತಿ ಯರ್ರಾಜಿ 100 ಮೀ ಹರ್ಡಲ್ಸ್‌ನಲ್ಲಿ ನೂತನ ರಾಷ್ಟ್ರೀಯ ದಾಖಲೆ ನಿರ್ಮಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ 61ನೇ ರಾಷ್ಟ್ರೀಯ ಓಪನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ 100 ಮೀಟರ್ ಮಹಿಳಾ ಹರ್ಡಲ್ಸ್ ಓಟದಲ್ಲಿ ಜ್ಯೋತಿ, 12.82 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ನೂತನ ರಾಷ್ಟ್ರೀಯ ದಾಖಲೆ ನಿರ್ಮಿಸಿದರು. ಅದ್ಭುತ ಫಾರ್ಮ್‌ನಲ್ಲಿರುವ ಜ್ಯೋತಿ, ಈ ವರ್ಷದ ಆರಂಭದಲ್ಲಿ ಅನುರಾಧಾ ಬಿಸ್ವಾಲ್ ಅವರ ದಾಖಲೆಯನ್ನು ಹಿಂದಿಕ್ಕಿದ್ದರು.
13 ಸೆಕೆಂಡ್ ಒಳಗಿನ ಸಮಯದಲ್ಲಿ 100 ಮೀಟರ್ ಮಹಿಳಾ ಹರ್ಡಲ್ಸ್ ಓಟವನ್ನು ಪೂರ್ಣಗೊಳಿಸಿದ ಮೊದಲ ಭಾರತೀಯ ಮಹಿಳೆ ಎಂಬ ಕೀರ್ತಿಗೆ ಜ್ಯೋತಿ ಅವರ ಪಾಲಾಗಿದೆ. ಆ ಮೂಲಕ ಈ ವರ್ಷದ ಆರಂಭದಲ್ಲಿ ನಿರ್ಮಿಸಿದ್ದ ತನ್ನದೇ ರಾಷ್ಟ್ರೀಯ ದಾಖಲೆ ಮುರಿದರು.
ಜೂನ್‌ನಲ್ಲಿ ಚೆನ್ನೈನಲ್ಲಿ ನಡೆದ ಅಂತರ- ರಾಜ್ಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಗೆಲ್ಲುವ ನೆಚ್ಚಿನ ಸ್ಪರ್ಧಿಯಾಗಿ ಟ್ರ್ಯಾಕ್‌ಗೆ ಇಳಿದಿದ್ದ ಜ್ಯೋತಿ, ಗೆಲುವಿನಂಚಿನಲ್ಲಿ ಎಡವಿ ಆಘಾತ ಅನಭಿವಿಸಿದ್ದರು.
ಬಡತನದಲ್ಲಿ ಅರಳಿದ ಪ್ರತಿಭೆ
10ನೇ ತರಗತಿಯಲ್ಲಿ ಓದುತ್ತಿದ್ದ ವೇಳೆ ಜ್ಯೋತಿ ಅಥ್ಲೀಟ್ ಆಗಬೇಕೆಂದು ಬಯಸಿದ್ದಳು. ಆದರೆ ಆ ದಿನಗಳಲ್ಲಿ ವಿಶಾಕಪಟ್ಟಣಂನಲ್ಲಿ ಜ್ಯೋತಿ ತಂದೆ ಸೆಕ್ಯುರಿಟಿ ಗಾರ್ಡ್ ಮತ್ತು ತಾಯಿ ಆಸ್ಪತ್ರೆಗಳಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದರು. ತಾನು ಓದುತ್ತಿದ್ದ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರ ಪ್ರೋತ್ಸಾಹದಿಂದಾಗಿ ಕ್ರೀಡೆಯಲ್ಲಿ ತೊಡಗಿಸಿಕೊಂಡೆ” ಎಂದು ಜ್ಯೋತಿ ಸಂದರ್ಶನವೊಂದರಲ್ಲಿ ಈ ಹಿಂದೆ ತಿಳಿಸಿದ್ದರು.