ಭೀಕರ ರಸ್ತೆ ಅಪಘಾತ: ಕ್ರಿಕೆಟರ್ ರಿಷಭ್ ಪಂತ್ ಗಂಭೀರ

Prasthutha|

ಹೊಸದಿಲ್ಲಿ: ಭಾರತದ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ಅವರು ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.

- Advertisement -

ರಿಷಭ್ ಪಂತ್ ಶುಕ್ರವಾರ ಬೆಳಗ್ಗೆ ಉತ್ತರಾಖಂಡದಿಂದ ದೆಹಲಿಗೆ ಹಿಂದಿರುಗುತ್ತಿದ್ದಾಗ ಅವರ ಕಾರು ಡಿವೈಡರ್‌ ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ರಿಷಭ್ ಅವರನ್ನು ದೆಹಲಿಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ದೆಹಲಿ ಹಾಗೂ ಡೆಹ್ರಾಡೂನ್‌ ರಾಷ್ಟ್ರೀಯ ಹೆದ್ದಾರಿಯಲ್ಲಿನ ರಸ್ತೆ ವಿಭಜಕಕ್ಕೆ ಮರ್ಸಿಡಿಸ್‌ ಕಾರು ಡಿಕ್ಕಿ ಹೊಡೆದ ಪರಿಣಾಮ ರಿಷಭ್‌ ಪಂತ್ ಅವರ ತಲೆ ಹಾಗೂ ಕಾಲುಗಳಿಗೆ ಗಾಯಗಳಾಗಿವೆ.

- Advertisement -

ರಿಷಭ್‌ ಪಂತ್‌ ಅವರು ದೆಹಲಿಯಿಂದ ಉತ್ತರಾಖಂಡಕ್ಕೆ ಮರಳುತ್ತಿದ್ದ ವೇಳೆ ಹಮ್ಮಾದ್‌ಪುರ್‌ ಝಾಲ್‌ ಸಮೀಪ ಈ ದುರ್ಘಟನೆ ನಡೆದಿದೆ. ಅವರು ಮರ್ಸಿಡಿಸ್‌ ಕಾರು ಚಲಾಯಿಸುತ್ತಿದ್ದರು. ಕಾರು ವೇಗವಾಗಿದ್ದ ಕಾರಣ ನಿಯಂತ್ರಣಕ್ಕೆ ಸಿಗದೆ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದ್ದು  ಕಾರು ಸಂಪೂರ್ಣ ಭಸ್ಮಗೊಂಡಿದೆ.

ರಿಷಭ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಲ್ಲಿ ಅವರ ಪ್ಲಾಸ್ಟಿಕ್ ಸರ್ಜರಿ ಮಾಡಲಾಗುವುದು. ವೈದ್ಯರ ಪ್ರಕಾರ, ರಿಷಬ್ ಪಂತ್ ಅವರ ಹಣೆ ಮತ್ತು ಕಾಲಿಗೆ ಗಾಯಗಳಾಗಿವೆ.

ಸದ್ಯ ರಿಷಬ್ ಪರಿಸ್ಥಿತಿ ಸ್ಥಿರವಾಗಿದ್ದು, ಅವರನ್ನು ರೂರ್ಕಿಯಿಂದ ದೆಹಲಿಗೆ ಕಳುಹಿಸಲಾಗುತ್ತಿದೆ ಎಂದು ಸಕ್ಷಮ್ ಆಸ್ಪತ್ರೆಯ ಅಧ್ಯಕ್ಷ ಡಾ ಸುಶೀಲ್ ನಗರ್ ತಿಳಿಸಿದ್ದಾರೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ರಿಷಬ್ ಅವರ ಕಾರು ರೇಲಿಂಗ್‌’ಗೆ ಡಿಕ್ಕಿ ಹೊಡೆದ ನಂತರ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಬಹಳ ಕಷ್ಟಪಟ್ಟು ಬೆಂಕಿಯನ್ನು ಹತೋಟಿಗೆ ತರಲಾಯಿತು.

Join Whatsapp
Exit mobile version