ಮಣಿಪುರಕ್ಕೆ ಭೇಟಿ ನೀಡಲಿರುವ INDIA ಒಕ್ಕೂಟದ ಸಂಸದರು

Prasthutha|

ನವದೆಹಲಿ: ಜನಾಂಗೀಯ ಹಿಂಸಾಚಾರದಿಂದ ನಲುಗುತ್ತಿರುವ ಈಶಾನ್ಯ ರಾಜ್ಯದ ಪರಿಸ್ಥಿತಿಯ ಪರಿಶೀಲನೆ ನಡೆಸಲು ವಿರೋಧ ಪಕ್ಷಗಳ ಮೈತ್ರಿಕೂಟ INDIAದ ಭಾಗವಾದ ಸಂಸದರು ಜುಲೈ 29 ಮತ್ತು 30 ರಂದು ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ.

- Advertisement -


ಸಂಸತ್ತಿನ 20ಕ್ಕೂ ಹೆಚ್ಚು ವಿರೋಧ ಪಕ್ಷದ ಸದಸ್ಯರ ನಿಯೋಗವು ಈ ವಾರಾಂತ್ಯದಲ್ಲಿ ಮಣಿಪುರಕ್ಕೆ ಭೇಟಿ ನೀಡಲಿದ್ದು, ನೇರವಾಗಿ ರಾಜ್ಯದಲ್ಲಿನ ಪರಿಸ್ಥಿತಿಯ ಅವಲೋಕನ ಮಾಡಲಿದೆ ಎಂದು ಲೋಕಸಭೆಯ ಕಾಂಗ್ರೆಸ್ ವಿಪ್ ಮಾಣಿಕಂ ಟ್ಯಾಗೋರ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.



Join Whatsapp