ಬೆಂಗಳೂರು: ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿಯನ್ನು ರೈಲ್ವೇ, ಸಂವಹನ, ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಶುಕ್ರವಾರ ಉದ್ಘಾಟಿಸಿದರು.
ಬೆಂಗಳೂರಿನ ಕೆಂಬ್ರಿಡ್ಜ್ ಲೇಔಟ್ ನಲ್ಲಿ ನಿರ್ಮಾಣವಾಗಿರುವ 3ಡಿ ಮುದ್ರಿತ ಅಂಚೆ ಕಚೇರಿಯನ್ನು ಅಶ್ವಿನಿ ವೈಷ್ಣವ್ ಅವರು ಉದ್ಘಾಟಿಸಿದ್ದು, ಬಳಿಕ ವಿಶೇಷ ಅಂಚೆ ಲಕೋಟೆ ಮತ್ತು ಅಂಚೆ ಕಚೇರಿಯ ಮಾದರಿ ಬಿಡುಗಡೆ ಮಾಡಿದರು.
ಏನಿದು 3ಡಿ ಅಂಚೆ ಕಚೇರಿ?
ಇದರ ನಿರ್ಮಾಣ ಕಾರ್ಯವೂ ಕಂಪ್ಯೂಟರ್ ನಿಯಂತ್ರಿತವಾಗಿರುತ್ತದೆ. ಯಾವುದೇ ವಿನ್ಯಾಸದಲ್ಲೂ ಕಟ್ಟಡ ನಿರ್ಮಿಸಲು ಇದರಿಂದ ಸಾಧ್ಯ. ಕ್ಯಾಡ್ ಮಾಡೆಲ್ ಅಥವಾ ಡಿಜಿಟಲ್ 3ಡಿ ಮಾಡಲ್ ರೂಪಿಸಿ ಕಂಪ್ಯೂಟರ್ ನಿರ್ದೇಶನದಲ್ಲಿ ಕಾಂಕ್ರೀಟ್ ಇತ್ಯಾದಿ ಸಾಮಗ್ರಿಗಳನ್ನು ಸೇರಿಸಲಾಗುತ್ತದೆ. ಈ 3ಡಿ ತಂತ್ರಜ್ಞಾನ ಬಳಸಿ ಕಟ್ಟಡ ನಿರ್ಮಾಣ ಮಾಡುವುದರಿಂದ ಸಮಯ ಮತ್ತು ಹಣ ಎರಡೂ ಉಳಿತಾಯವಾಗುತ್ತದೆ ಎಂದು ಕಂಪನಿ ತಿಳಿಸಿದೆ.
The spirit of Aatmanirbhar Bharat!
— Ashwini Vaishnaw (@AshwiniVaishnaw) August 18, 2023
🇮🇳India’s first 3D printed Post Office.
📍Cambridge Layout, Bengaluru pic.twitter.com/57FQFQZZ1b