Home ಟಾಪ್ ಸುದ್ದಿಗಳು ರಾಜಸ್ಥಾನದಲ್ಲಿ ಓಮಿಕ್ರಾನ್ ಗೆ ವ್ಯಕ್ತಿ ಬಲಿ

ರಾಜಸ್ಥಾನದಲ್ಲಿ ಓಮಿಕ್ರಾನ್ ಗೆ ವ್ಯಕ್ತಿ ಬಲಿ

ನವದೆಹಲಿ: ರಾಜಸ್ಥಾನದಲ್ಲಿ ಓಮಿಕ್ರಾನ್ ಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದು, ಓಮಿಕ್ರಾನ್ ಮೊದಲ ಸಾವು ಎಂದು ಸರ್ಕಾರಿ ಮೂಲಗಳು ವರದಿ ಮಾಡಿವೆ.

ಮೂಲತಃ ರಾಜಸ್ಥಾನದ ಲಕ್ಷ್ಮೀನಾರಾಯಣನಗರ 73 ವರ್ಷದ ವ್ಯಕ್ತಿಯೊಬ್ಬರು ಓಮಿಕ್ರಾನ್ ಸಾವನ್ನಪ್ಪಿರುವುದು ಖಚಿತಗೊಂಡಿದೆ ಎಂದು ಹೇಳಲಾಗಿದೆ.

ಡಿಸೆಂಬರ್ 15 ರಂದು ಕೋವಿಡ್ ಪಾಸಿಟಿವ್ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಮಧುಮೇಹ, ಅಧಿಕ ರಕ್ತದೊತ್ತಡ ಸೇರಿದಂತೆ ಹಲವಾರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಓಮಿಕ್ರಾನ್ ನಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

Join Whatsapp
Exit mobile version