ಇಂದು ದೇಶದ ಮೊದಲ ಖಾಸಗಿ ರಾಕೆಟ್ ಉಡಾವಣೆ

Prasthutha|

ಚೆನ್ನೈ: ಖಾಸಗಿ ಕಂಪನಿಯೊಂದು ಅಭಿವೃದ್ಧಿಪಡಿಸಿರುವ ದೇಶದ ಮೊದಲ ರಾಕೆಟ್ ವಿಕ್ರಮ್-ಎಸ್ ಅನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಶುಕ್ರವಾರ ಉಡಾವಣೆ ಮಾಡಲು ಸಜ್ಜಾಗಿದೆ.

- Advertisement -

ಶುಕ್ರವಾರ ಬೆಳಿಗ್ಗೆ 11.30 ಕ್ಕೆ ಚೆನ್ನೈನಿಂದ 115 ಕಿಮೀ ದೂರದಲ್ಲಿರುವ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ತನ್ನ ಬಾಹ್ಯಾಕಾಶ ನಿಲ್ದಾಣದಿಂದ ರಾಕೆಟ್’ನ ಮೊದಲ ಉಡಾವಣೆ ನಡೆಯಲಿದೆ ಎಂದು ಕೇಂದ್ರ ರಾಜ್ಯ (ಸ್ವತಂತ್ರ ಉಸ್ತುವಾರಿ), ವಿಜ್ಞಾನ ಮತ್ತು ತಂತ್ರಜ್ಞಾನ, ಪರಮಾಣು ಶಕ್ತಿ ಮತ್ತು ಬಾಹ್ಯಾಕಾಶ ಸಚಿವ ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ನಾಲ್ಕು ವರ್ಷ ಹಿಂದೆ ಆರಂಭವಾಗಿದ್ದ ಸ್ಟಾರ್ಟಪ್ ಸ್ಕೈರೂಟ್ ಏರೋಸ್ಪೇಸ್ ತನ್ನ ವಿಕ್ರಮ್-ಎಸ್ ರಾಕೆಟ್’ನ ಚೊಚ್ಚಲ ಉಡಾವಣೆ ಮಾಡಲು ಸಿದ್ಧವಾಗಿದೆ. ಇದು ದೇಶದ ಬಾಹ್ಯಾಕಾಶ ಉದ್ಯಮಕ್ಕೆ ಖಾಸಗಿ ವಲಯದ ಸೇರ್ಪಡೆಯ ಮುನ್ನುಡಿಯಾಗಲಿದೆ. ಭಾರತೀಯ ಬಾಹ್ಯಾಕಾಶ ಕಾರ್ಯಕ್ರಮದ ಪಿತಾಮಹ, ದಿವಂಗತ ವಿಕ್ರಮ್ ಸಾರಾಭಾಯ್ ಅವರಿಗೆ ಗೌರವಾರ್ಥವಾಗಿ ರಾಕೆಟ್’ಗೆ ವಿಕ್ರಮ್ ಎಂದು ಹೆಸರಿಡಲಾಗಿದೆ.

- Advertisement -

2020ರಲ್ಲಿ ಖಾಸಗಿಯವರಿಗೂ ಬಾಹ್ಯಾಕಾಶ ಕ್ಷೇತ್ರ ಪ್ರವೇಶಿಸಲು ಅನುಮತಿ ದೊರೆತ ನಂತರ ಭಾರತೀಯ ಬಾಹ್ಯಾಕಾಶ ಕಾರ್ಯಕ್ರಮಕ್ಕೆ ಪ್ರವೇಶ ಪಡೆದ ಮೊದಲ ಖಾಸಗಿ ಕಂಪನಿ ಸ್ಕೈರೂಟ್ ಏರೋಸ್ಪೇಸ್ ಆಗಿದೆ.

Join Whatsapp