ಅಪೌಷ್ಠಿಕತೆಯಲ್ಲಿ ಭಾರತದ ಸೂಚ್ಯಂಕ ಏರುತ್ತಿದೆ, ಏಕೆ ಹೀಗಾಯ್ತು ವಿಶ್ವಗುರು ಉತ್ತರಿಸಬೇಕು: ಸಿಎಂ ಸಿದ್ದರಾಮಯ್ಯ

Prasthutha|

ಬೆಂಗಳೂರು: ಆರೋಗ್ಯ ಸೂಚ್ಯಂಕದಲ್ಲಿ ಗುಜರಾತ್ ರಾಜ್ಯ ಕುಸಿಯುತ್ತಿದೆ. ಅಪೌಷ್ಠಿಕತೆಯಲ್ಲಿ ಭಾರತದ ಸೂಚ್ಯಂಕ ಏರುತ್ತಿದೆ.ಏಕೆ ಹೀಗಾಯ್ತು ಎಂದು ವಿಶ್ವಗುರು ಎಂದು ಸುಮ್ ಸುಮ್ನೆ ಕರೆಸಿಕೊಳ್ಳುವ ಪ್ರಧಾನಮಂತ್ರಿ ಮೋದಿಯವರು ಉತ್ತರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. 

- Advertisement -

ರಾಜ್ಯ ಸರ್ಕಾರದ ಅತ್ಯಂತ ಮಹತ್ವಪೂರ್ಣ ಮತ್ತು ಅತ್ಯಂತ ಜನಾರೋಗ್ಯ ಕಾರ್ಯಕ್ರಮವಾದ ಅನೀಮಿಯ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಗುಜರಾತ್ ಮಾದರಿ ಎಂದು ಭಜನೆ ಮಾಡಿದವರು ಗುಜರಾತ್ ಅಪೌಷ್ಠಿಕತೆ ಸೂಚ್ಯಂಕದಲ್ಲಿ ಮೇಲಕ್ಕೆ ಏರುತ್ತಾ, ಆರೋಗ್ಯ ಸೂಚ್ಯಂಕದಲ್ಲಿ ಕುಸಿಯುತ್ತಿರುವುದು ಏಕೆ ಎನ್ನುವುದಕ್ಕೆ ಉತ್ತರಿಸಬೇಕು. ಇದೇ ಇಡೀ ದೇಶಕ್ಕೆ ಮಾದರಿ ಆಗಲು ಸಾಧ್ಯವೇ ಎಂದು ಲೇವಡಿ ಮಾಡಿದರು.

- Advertisement -

 ಬಡತನ-ದಾರಿದ್ರ್ಯ-ಅನಕ್ಷರತೆ ಹೋಗದೆ ಎಲ್ಲರಿಗೂ ಉತ್ತಮ ಆರೋಗ್ಯ ಸಿಗುವುದಿಲ್ಲ. ಆದ್ದರಿಂದ ಈ ಮೂರು ಪಿಡುಗುಗಳಿಗೆ ಚಿಕಿತ್ಸೆ ಕೊಡುವುದು ನಮ್ಮ ಸರ್ಕಾರದ ಪ್ರಥಮ ಆಧ್ಯತೆಯಾಗಿದೆ.

ಪ್ರತಿಯೊಬ್ಬರ ಮನೆ ಬಾಗಿಲಿಗೆ ಆರೋಗ್ಯದ ಸವಲತ್ತು ತಲುಪಿಸುವುದು ನಮ್ಮ ಸರ್ಕಾರದ ಗುರಿಯಾಗಿದೆ. ಇದಕ್ಕಾಗಿ ಸರ್ಕಾರ ಅಗತ್ಯವಿದ್ದಷ್ಟು ಹಣ ನೀಡಲು ಸಿದ್ದವಿದೆ ಎಂದರು.

ಮಹಿಳಾ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಬ್ಬರೂ ಸೇರಿ ನಮ್ಮ ರಾಜ್ಯದ ಮಕ್ಕಳು ಮತ್ತು ಪ್ರತಿಯೊಬ್ಬರೂ ಅತ್ಯಂತ ಆರೋಗ್ಯವಂತರಾಗುವಂತೆ ಇನ್ನಷ್ಟು ಹೆಚ್ಚೆಚ್ಚು ಶ್ರಮಿಸಿ ಸರ್ಕಾರದ ಗುರಿಯನ್ನು ಸಾಧಿಸಿ ತೋರಿಸಬೇಕು ಎಂದು ಕರೆ ನೀಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ ಬೃಹತ್ ಕಾರ್ಯಕ್ರಮದಲ್ಲಿ ಉದ್ಘಾಟಿಸಿದರು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.



Join Whatsapp