Home ಟಾಪ್ ಸುದ್ದಿಗಳು INDIA ಮುಂದಿನ ಸಭೆ ಮುಂಬೈನಲ್ಲಿ : ಮಲ್ಲಿಕಾರ್ಜುನ ಖರ್ಗೆ ಹೇಳಿಕೆ

INDIA ಮುಂದಿನ ಸಭೆ ಮುಂಬೈನಲ್ಲಿ : ಮಲ್ಲಿಕಾರ್ಜುನ ಖರ್ಗೆ ಹೇಳಿಕೆ

ಬೆಂಗಳೂರು: 26 ವಿಪಕ್ಷಗಳ ಒಕ್ಕೂಟಕ್ಕೆ ನೂತನ ಹೆಸರಾಗಿ INDIA ಎಂದು ಇಡಲಾಗಿದ್ದು ಮುಂದಿನ ಸಭೆಯು ಮುಂಬೈನಲ್ಲಿ ನಡೆಯಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.


ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೊಟೇಲ್ ನಲ್ಲಿ ಎರಡು ದಿನ ನಡೆದ ಸಭೆಯ ಬಳಿಕ ನಡೆಸಲಾದ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೇಂದ್ರದ ಬಿಜೆಪಿ ಸರ್ಕಾರವು ಸಂವಿಧಾನ ವಿರೋಧಿ ನಡೆಗಳನ್ನು ಅನುಸರಿಸುತ್ತಿದೆ. ಕೇಂದ್ರದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ದಬ್ಬಾಳಿಕೆ ನಡೆಸುತ್ತಿದೆ. ಭಾರತದ ಸಾರ್ವಭೌಮತ್ವದ ಪರವಾಗಿ ನಾವು ಕೆಲಸ ಮಾಡುತ್ತೇವೆ. ವಿಪಕ್ಷಗಳು ಸಭೆ ಮಾಡುವುದನ್ನು ನೋಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಭಯ ಉಂಟಾಗಿದೆ’ ಎಂದು ಹೇಳಿದರು.

Join Whatsapp
Exit mobile version