ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಪ್ರಕಟ: ರೋಹಿತ್ ಸಾರಥ್ಯ, ಹೊಸಬರಿಗೆ ಮಣೆ

Prasthutha|

ನವದೆಹಲಿ: ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಬಳಿಕ ನಡೆಯಲಿರುವ ತವರಿನಲ್ಲಿ ನ್ಯೂಜಿಲೆಂಟ್ ವಿರುದ್ಧ ನಡೆಯಲಿರುವ ಟಿ-20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ವಿರಾಟ್ ಕೊಹ್ಲಿ ನಿರ್ಗಮನದಿಂದ ತೆರವಾಗಿರುವ ನಾಯಕನ ಸ್ಥಾನವನ್ನು ನಿರೀಕ್ಷೆಯಂತೆಯೇ ರೋಹಿತ್ ಶರ್ಮಾ ವಹಿಸಿಕೊಳ್ಳಲಿದ್ದಾರೆ. ಕನ್ನಡಿಗ ಕೆ.ಎಲ್ ರಾಹುಲ್ ಉಪನಾಯಕನ ಜವಾಬ್ಧಾರಿ ವಹಿಸಲಿದ್ದಾರೆ.

- Advertisement -

ವಿರಾಟ್ ಕೊಹ್ಲಿ,ರವೀಂದ್ರ ಜಡೇಜಾ, ಮುಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದ್ದು, ಐಪಿಎಲ್’ನಲ್ಲಿ ಮಿಂಚಿದ್ದ ಯುವ ಆಟಗಾರರಿಗೆ ಟೀಮ್ ಇಂಡಿಯಾದ ಬಾಗಿಲು ತೆರೆದಿದೆ. ಇತ್ತೀಚಗಷ್ಟೇ ಮುಕ್ತಾಯಗೊಂಡ ಐಪಿಎಲ್ ಟೂರ್ನಿಯಲ್ಲಿ ಆರೆಂಜ್ ಕ್ಯಾಪ್ ಪಡೆದಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭಿಕ ಬ್ಯಾಟರ್ ಋತುರಾಜ್ ಗಾಯಕ್ವಾಡ್, ಪರ್ಪಲ್ ಕ್ಯಾಪ್ ಹೋಲ್ಡರ್ RCBಯ ಹರ್ಷಲ್ ಪಟೇಲ್, ಡೆಲ್ಲಿ ಕ್ಯಾಪಿಟಲ್ಸ್’ನ ಯಶಸ್ವಿ ಬೌಲರ್ ಆವೇಶ್ ಖಾನ್ ಹಾಗೂ KKRನ ಆಲ್ ರೌಡರ್ ವೆಂಕಟೇಶ್ ಅಯ್ಯರ್ ಮೊದಲ ಬಾರಿಗೆ ಟೀಮ್ ಇಂಡಿಯಾ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ತಂಡ : ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಇಶಾನ್ ಕಿಶಾನ್, ವೆಂಕಟೇಶ್ ಅಯ್ಯರ್, ಯಜುವೇಂದ್ರ ಚಾಹಲ್, ಆರ್. ಆಶ್ವಿನ್, ಅಕ್ಸರ್ ಪಟೇಲ್, ಆವೇಶ್ ಖಾನ್, ಭುವನೇಶ್ವರ್ ಕುಮಾರ್, ದೀಪಕ್ ಚಾಹರ್, ಹರ್ಷಲ್ ಪಟೇಲ್, ಮುಹಮ್ಮದ್ ಸಿರಾಜ್

- Advertisement -

ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ-20 ಸರಣಿಯು ನವೆಂಬರ್ 17ರಿಂದ ಆರಂಭವಾಗಲಿದೆ. ಮೊದಲ ಪಂದ್ಯ ಜೈಪುರದಲ್ಲಿ, ಎರಡನೇ ಪಂದ್ಯ ನವೆಂಬರ್ 19ರಂದು ರಾಂಚಿ, ಮೂರನೇ ಹಾಗೂ ಸರಣಿಯ ಕೊನೇಯ ಟಿ-20 ಪಂದ್ಯ ನ.21ರಂದು ಕೋಲ್ಕತ್ತಾದಲ್ಲಿ ನಡೆಯಲಿದೆ.  



Join Whatsapp