ಭಾರತದ ಷೇರು ಮಾರುಕಟ್ಟೆ ಅಪಾಯದಲ್ಲಿದೆ: ರಾಹುಲ್ ಗಾಂಧಿ ಆತಂಕ

Prasthutha|

ನವದೆಹಲಿ: ಭಾರತದ ಷೇರು ಮಾರುಕಟ್ಟೆ ಅಪಾಯದಲ್ಲಿದೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಆತಂಕ ವ್ಯಕ್ತಪಡಿಸಿದ್ದಾರೆ.

- Advertisement -

ಯುಎಸ್‌ ಸ್ಟಾಕ್‌ ಸೆಲ್ಲರ್ ಹಿಂಡನ್‌ಬರ್ಗ್ ರೀಸರ್ಚ್, ಅದಾನಿ ಷೇರು ಹಗರಣದಲ್ಲಿ ಸೆಬಿ ಮುಖ್ಯಸ್ಥರ ಕೈವಾಡವಿದೆ ಎಂದು ಆರೋಪ ಮಾಡಿದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಈ ಆತಂಕ ವ್ಯಕ್ತಪಡಿಸಿದ್ದಾರೆ.

ಭಾರತೀಯ ಷೇರು ಮಾರುಕಟ್ಟೆಯನ್ನು ನಿಯಂತ್ರಿಸುವ ಸಂಸ್ಥೆಗಳು ರಾಜಿ ಮಾಡಿಕೊಂಡಿರುವುದರಿಂದ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಅಪಾಯವಿದೆ ಎಂದು ಜನರ ಗಮನಕ್ಕೆ ತರುವುದು ವಿರೋಧ ಪಕ್ಷದ ನಾಯಕನಾಗಿ ನನ್ನ ಕರ್ತವ್ಯ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಸೆಬಿ ಮುಖ್ಯಸ್ಥೆ ಮಾಧವಿ ಪುರಿ ಬುಚ್ ಅವರು ಅದಾನಿ ಷೇರು ಹಗರಣದಲ್ಲಿ ಸಹಾಯ ಮಾಡಿದ್ದಕ್ಕಾಗಿ, ಅದಾನಿ ಅವರ ವಿದೇಶಿ ಷೇರುಗಳಲ್ಲಿ ಪಾಲು ಪಡೆದಿದ್ದಾರೆ ಎಂದು ಹಿಂಡೆನ್‌ಬರ್ಗ್ ಆರೋಪ ಮಾಡಿದೆ.

- Advertisement -

ಶನಿವಾರ ಬಿಡುಗಡೆಯಾದ ಹಿಂಡನ್‌ಬರ್ಗ್ ವರದಿಯಲ್ಲಿ ಮಾಧವಿ ಬುಚ್ ಮತ್ತು ಆಕೆಯ ಪತಿ ಧವಲ್ ಬುಚ್ ಅವರು ಬರ್ಮುಡಾ ಮೂಲದ ಗ್ಲೋಬಲ್ ಆಪರ್ಚುನಿಟೀಸ್ ಫಂಡ್‌ನ ಉಪ-ನಿಧಿಯಲ್ಲಿ ಹೂಡಿಕೆ ಮಾಡಿದ್ದಾರೆ ಎಂದು ಹೇಳಿದೆ.

2017 ರಲ್ಲಿ ಮಾಧಬಿ ಪುರಿ ಬುಚ್ ಸೆಬಿಗೆ ಸೇರುವ ಮೊದಲು ಧವಲ್ ಬುಚ್ ಖಾತೆಯ ಏಕೈಕ ಆಪರೇಟರ್ ಆಗಿದ್ದರು ಎಂದು ವರದಿಯಲ್ಲಿ ಆರೋಪಿಸಲಾಗಿದೆ. ಇದೊಂದು ಗಂಭೀರ ಆರೋಪ ಎಂದು ಕರೆದಿರುವ ರಾಹುಲ್ ಗಾಂಧಿ, ಅಂಪೈರ್ ಸ್ವತಃ ರಾಜಿ ಮಾಡಿಕೊಂಡಂತೆ ಎಂದು ಹೇಳಿದ್ದಾರೆ.

ಯಾಕೆ ರಾಜೀನಾಮೆ ಕೊಟ್ಟಿಲ್ಲ

ತಮ್ಮ ಮೇಲೆ ಆರೋಪ ಬಂದ ಹೊರತಾಗಿಯೂ ಸೆಬಿ ಅಧ್ಯಕ್ಷೆ ಮಾಧವಿ ಪುರಿ ಬುಚ್ ಇನ್ನೂ ರಾಜೀನಾಮೆ ಕೊಟ್ಟಿಲ್ಲ ಎಂದು ರಾಹುಲ್ ಗಾಂಧಿ ಪ್ರಶ್ನೆ ಮಾಡಿದ್ದಾರೆ. ಹೂಡಿಕೆದಾರರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಕಳೆದುಕೊಂಡರೆ, ಯಾರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ – ಪ್ರಧಾನಿ ಮೋದಿ, ಸೆಬಿ ಅಧ್ಯಕ್ಷೆ ಅಥವಾ ಗೌತಮ್ ಅದಾನಿ? ಎಂದು ಪ್ರಶ್ನೆ ಮಾಡಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.



Join Whatsapp