ದೆಹಲಿ: ಭಾರತದ ಅತ್ಯಂತ ಎತ್ತರದ ವ್ಯಕ್ತಿ ಧರ್ಮೇಂದ್ರ ಪ್ರತಾಪ್ ಸಿಂಗ್ ಅವರು (ಶನಿವಾರ) ಸಮಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಪ್ರತಾಪ್ ಸಿಂಗ್ ಅವರು ಮೂಲತಃ ಉತ್ತರಪ್ರದೇಶದವರಾಗಿದ್ದು 2.4 ಮೀಟರ್ (8 ಅಡಿ 1 ಇಂಚು) ಎತ್ತರವಿದ್ದಾರೆ. ಧರ್ಮೇಂದ್ರ ಪ್ರತಾಪ್ ಸಿಂಗ್ ಅವರು ಸಮಾಜವಾದಿ ಪಕ್ಷ ಸೇರ್ಪಡೆಯಾದ ಬಗ್ಗೆ ಪಕ್ಷದ ಅಧ್ಯಕ್ಷ ನರೇಶ್ ಉತ್ತಮ್ ಪಟೇಲ್ ದೃಢಪಡಿಸಿದ್ದಾರೆ. ಅಲ್ಲದೆ ಮುಂಬರುವ ವಿಧಾನಸಭಾ ಚುನಾವಣೆ ದೃಷ್ಟಿಯಿಂದ ಪಕ್ಷಕ್ಕೆ ಬಲಬಂದಂತಾಗಿದೆ ಎಂದು ಹೇಳಿದ್ದಾರೆ.
ಧರ್ಮೇಂದ್ರ ಪ್ರತಾಪ್ ಸಿಂಗ್ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗುವ ವೇಳೆ, ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡ ಹಾಜರಿದ್ದರು.