ದೇಶದಲ್ಲಿ ನಿರುದ್ಯೋಗ ದರ ಕಳೆದ 6 ವರ್ಷಗಳಲ್ಲಿ ಅತ್ಯಂತ ಕಡಿಮೆ: ಪ್ರಧಾನಿ ಮೋದಿ

Prasthutha|

ನವದೆಹಲಿ: ದೇಶದಲ್ಲಿ ನಿರುದ್ಯೋಗ ದರವು ಕಳೆದ 6 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಟ್ಟದಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

- Advertisement -


ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ವಿಶ್ವಮಟ್ಟದಲ್ಲಿ ಗಮನಾರ್ಹವಾಗಿ ಬೆಳೆಯುತ್ತಿರುವ ಭಾರತವು ಯುವಜನರಿಗೆ ಹೊಸ ಹೊಸ ಅವಕಾಶಗಳನ್ನು ಸೃಷ್ಟಿಸುತ್ತಿದೆ. ಭಾರತದ ಆರ್ಥಿಕತೆಯು ವೇಗವಾಗಿ ಪ್ರಗತಿ ಕಾಣುತ್ತಿರುವುದರಿಂದ ಹಲವು ಕ್ಷೇತ್ರಗಳಲ್ಲಿ ಯುವಜನರಿಗೆ ಅವಕಾಶಗಳು ಹೆಚ್ಚಿವೆ. ದೇಶದಲ್ಲಿ ಉದ್ಯೋಗ ಸೃಷ್ಟಿಯೂ ಹೆಚ್ಚಾಗಿದೆ. ಇತ್ತೀಚಿನ ಸಮೀಕ್ಷೆಯ ಪ್ರಕಾರ, ನಿರುದ್ಯೋಗ ದರವೂ ಕೆಳಮಟ್ಟಕ್ಕೆ ಇಳಿದಿದೆ ಎಂದು ವಿವರಿಸಿದರು.