ಇಂಡಿಗೋ, ಏರ್‌ ಇಂಡಿಯಾ, ಸ್ಪೈಸ್‌ಜೆಟ್‌ ಸೇರಿ ಮತ್ತೆ 95 ವಿಮಾನಗಳಿಗೆ ಬಾಂಬ್‌ ಬೆದರಿಕೆ ಕರೆ

Prasthutha|

ನವದೆಹಲಿ: ವಿಮಾನಗಳಿಗೆ ಬಾಂಬ್‌ ಬೆದರಿಕೆ ಕರೆಗಳ ತಲೆನೋವು ಹೆಚ್ಚಾಗಿದೆ. ಇಂದು ಒಂದೇ ದಿನ ಮತ್ತೆ 95 ಫ್ಲೈಟ್‌ಗಳಿಗೆ ಬಾಂಬ್‌ ಬೆದರಿಕೆ ಕರೆಗಳು ಬಂದಿವೆ.

- Advertisement -

25 ಆಕಾಶ ಏರ್ ವಿಮಾನಗಳು, ಏರ್ ಇಂಡಿಯಾ, ಇಂಡಿಗೋ, ಸ್ಪೈಸ್‌ಜೆಟ್‌ ಮತ್ತು ವಿಸ್ತಾರದ ತಲಾ 20 ವಿಮಾನಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಕಳೆದ 10 ದಿನಗಳಲ್ಲಿ 250 ಕ್ಕೂ ಅಧಿಕ ವಿಮಾನಗಳಿಗೆ ಹೀಗೆ ಬೆದರಿಕೆ ಕರೆಗಳು ಬಂದಿವೆ. ಕಠಿಣ ನಿಯಮಗಳ ಜಾರಿಗೆ ಸರ್ಕಾರ ಚಿಂತಿಸುತ್ತಿರುವ ಹೊತ್ತಲ್ಲೂ ಬೆದರಿಕೆ ಕರೆಗಳು ನಿಂತಿಲ್ಲ.

ಈ ಮೊದಲು ದಿನ ಬಿಟ್ಟು ದಿನ 170 ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದಿದ್ದವು. ಅವುಗಳಲ್ಲಿ ಹೆಚ್ಚಿನವು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಂದ ಬಂದಿವೆ. ಅವು ವಂಚನೆ ಕರೆಗಳು ಎಂದು ನಂತರ ಸ್ಪಷ್ಟವಾಯಿತು. ಬೆದರಿಕೆ ಕರೆ ಹಿನ್ನೆಲೆ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿ ನೂರಾರು ಪ್ರಯಾಣಿಕರಿಗೆ ಅನಾನುಕೂಲತೆ ಉಂಟಾಯಿತು



Join Whatsapp