ಇಂದಿರಾ ಕ್ಯಾಂಟೀನ್​​​ಗಳಿಗಾಗಿ ಹೊಸ ಟೆಂಡರ್​​: ಸರ್ಕಾರದಿಂದ ಅನುಮೋದನೆ

Prasthutha|

ಬೆಂಗಳೂರು: ಇಂದಿರಾ ಕ್ಯಾಂಟೀನ್‌ಗಳಿಗೆ ಪುನಶ್ಚೇತನ ನೀಡಲು ಮುಂದಾಗಿರುವ ನೂತನ ಕಾಂಗ್ರೆಸ್​ ಸರ್ಕಾರ, ಅದಕ್ಕಾಗಿ ಟೆಂಡರ್‌ಗಳನ್ನು ಕರೆಯಲು ಬಿಬಿಎಂಪಿಗೆ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ. ಉತ್ತಮ ಗುಣಮಟ್ಟದ ಸೇವೆಯನ್ನು ಖಚಿತಪಡಿಸಿಕೊಳ್ಳಲು ಯೋಜನೆಯನ್ನು ಪ್ರತಿ ಬಿಬಿಎಂಪಿ ವಲಯಕ್ಕೆ ಒಂದರಂತೆ ಎಂಟು ಪ್ಯಾಕೇಜ್‌ಗಳಾಗಿ ವಿಭಜಿಸಲು ಬಿಬಿಎಂಪಿ ಚಿಂತನೆ ನಡೆಸಿದೆ.

- Advertisement -

ಸಬ್ಸಿಡಿ ದರದಲ್ಲಿ ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟವನ್ನು ಒದಗಿಸುವ 200 ಕ್ಯಾಂಟೀನ್‌ಗಳನ್ನು ನಡೆಸಲು ಪೌರ ಸಂಸ್ಥೆಗೆ ದಿನಕ್ಕೆ 31 ಲಕ್ಷ ರೂಪಾಯಿ ಬೇಕಾಗುತ್ತದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಟೆಂಡರ್‌ ಕರೆಯುತ್ತೇವೆ ಎಂದು ಬಿಬಿಎಂಪಿಯ ವಿಶೇಷ ಆಯುಕ್ತ ಡಾ. ತ್ರಿಲೋಕ್ ಚಂದ್ರ ಅವರು ತಿಳಿಸಿರುವುದಾಗಿ ವರದಿಯಾಗಿದೆ.

ಟೆಂಡರ್‌ಗಳನ್ನು ಅನುಮೋದಿಸುವುದರ ಜೊತೆಗೆ, 50 ಹೊಸ ಕ್ಯಾಂಟೀನ್‌ಗಳನ್ನು ಸ್ಥಾಪಿಸಲು ಮೂಲಸೌಕರ್ಯಗಳನ್ನು ಒದಗಿಸಲೂ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಅವರು ಹೇಳಿದ್ದಾರೆ. ಪ್ರಸ್ತುತ ನಗರದಾದ್ಯಂತ ಇಂದಿರಾ ಕ್ಯಾಂಟೀನ್‌ಗಳನ್ನು ನಡೆಸುವ ಜವಾಬ್ದಾರಿಯನ್ನು ಎರಡು ಸಂಸ್ಥೆಗಳಿಗೆ ವಹಿಸಲಾಗಿದೆ.

- Advertisement -

ಪ್ರತಿ ಇಂದಿರಾ ಕ್ಯಾಂಟೀನ್‌ನಲ್ಲಿ ಗ್ರಾಹಕರು ತಕ್ಷಣ ದೂರುಗಳನ್ನು ನೀಡಲು ಅವಕಾಶ ಕಲ್ಪಿಸಲು ಹಾಗೂ ದೂರುಗಳನ್ನು ಖಚಿತಪಡಿಸಿಕೊಳ್ಳಲು ಸಹಾಯವಾಣಿ ಸಂಖ್ಯೆ ಆರಂಭಿಸಲು ಬಿಬಿಎಂಪಿ ಚಿಂತನೆ ನಡೆಸಿದೆ ಎಂದೂ ವರದಿ ತಿಳಿಸಿದೆ.



Join Whatsapp