ಇಂಡೋನೇಷ್ಯಾ ಪ್ರಬಲ ಭೂಕಂಪ: ಮೃತರ ಸಂಖ್ಯೆ 162 ಕ್ಕೇರಿಕೆ

Prasthutha|

ಜಕಾರ್ತ:  ಇಂಡೋನೇಷ್ಯಾದ ರಾಜಧಾನಿ ಜಕಾರ್ತದಲ್ಲಿ ಸೋಮವಾರ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ ಸುಮಾರು 700 ಕ್ಕೂ ಅಧಿಕ ಜನರು ಗಾಯಗೊಂಡಿದ್ದು, ಸಾವನ್ನಪ್ಪಿದವರ ಸಂಖ್ಯೆ 162 ಕ್ಕೇರಿದೆ.

- Advertisement -

ಭೂಕಂಪನದ ತೀವ್ರತೆಯಿಂದಾಗಿ ಸಾವಿರಾರು ಕಟ್ಟಡಗಳಿಗೆ ಹಾನಿಯಾಗಿದ್ದು, ಕಟ್ಟಡಗಳ ಅವಶೇಷಗಳ ಅಡಿ ಸಿಲುಕಿ ಅನೇಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸ್ಥಳೀಯ ಆಡಳಿತದ ವಕ್ತಾರರು ತಿಳಿಸಿದ್ದಾರೆ.

ಸದ್ಯಕ್ಕೆ ನನಗೆ ದೊರೆತ ಮಾಹಿತಿ ಪ್ರಕಾರ, ಸುಮಾರು 162 ಮಂದಿ ಮೃತಪಟ್ಟಿದ್ದು, ಕನಿಷ್ಠ 700 ಮಂದಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ಹೆಚ್ಚಿನವರು ಕಟ್ಟಡಗಳ ಅವಶೇಷಗಳ ಅಡಿ ಸಿಲುಕಿದ್ದವರು. ಈ ಹಿನ್ನೆಲೆಯಲ್ಲಿ ಮೃತರ ಮತ್ತು ಗಾಯಾಳುಗಳ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಸಿಯಾಂಜೂರ್ ಆಡಳಿತದ ಮುಖ್ಯಸ್ಥ ಹರ್ಮನ್ ಸುಹೆರ್ಮನ್ ಬ್ರಾಡ್’ಕಾಸ್ಟರ್ ಮೆಟ್ರೋ ಟಿವಿಗೆ ತಿಳಿಸಿದ್ದಾರೆ.

- Advertisement -

ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಭೂಕಂಪನವು 5.6 ರಿಕ್ಟರ್ ತೀವ್ರತೆಯನ್ನು ಹೊಂದಿತ್ತು ಮತ್ತು ಜಕಾರ್ತಾದ ದಕ್ಷಿಣದ ಪಟ್ಟಣಗಳ ಬಳಿ ಭೂಕಂಪನದ ಕೇಂದ್ರಬಿಂದು ಪತ್ತೆಯಾಗಿದೆ.

ಇಂಡೋನೇಷ್ಯಾದ ರಾಜಧಾನಿ ಜಕಾರ್ತದಿಂದ ಅಗ್ನೇಯಕ್ಕೆ 75 ಕಿ.ಮೀ ದೂರದಲ್ಲಿರುವ ಸಿಯಾಂಜೂರ್’ನಲ್ಲಿ ಮತ್ತು 10 ಕಿ.ಮೀ ಆಳದಲ್ಲಿ ಈ ಭೂಕಂಪ ಉಂಟಾಗಿದೆ ಎಂದು ಹವಾಮಾನ ಮತ್ತು ಭೂಭೌತಶಾಸ್ತ್ರ ಸಂಸ್ಥೆ ತಿಳಿಸಿದೆ. ಅಲ್ಲದೆ ಈ ಪ್ರದೇಶದಲ್ಲಿ ಸುನಾಮಿಯ ಸಾಧ್ಯತೆಯಿಲ್ಲ ಎಂದು ಅಭಿಪ್ರಾಯ ಪಟ್ಟಿದೆ.

ಪ್ರಥಮ ಭೂಕಂಪದ ಎರಡು ಗಂಟೆಗಳ ಬಳಿಕ ಮತ್ತೆ 25 ಭೂಕಂಪನ ದಾಖಲಿಸಲಾಗಿದೆ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.



Join Whatsapp