Home ಟಾಪ್ ಸುದ್ದಿಗಳು ಗಣರಾಜ್ಯೋತ್ಸವಕ್ಕೆ ಇಂಡೋನೇಷ್ಯಾ ಅಧ್ಯಕ್ಷ ಸುಬಿಯಾಂಟೊ ಅತಿಥಿ

ಗಣರಾಜ್ಯೋತ್ಸವಕ್ಕೆ ಇಂಡೋನೇಷ್ಯಾ ಅಧ್ಯಕ್ಷ ಸುಬಿಯಾಂಟೊ ಅತಿಥಿ

ನವದೆಹಲಿ: ಇಂಡೋನೇಷ್ಯಾ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಅವರು ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು ಎಂದು ವಿದೇಶಾಂಗ ಸಚಿವಾಲಯ (ಎಂಇಎ) ಗುರುವಾರ ತಿಳಿಸಿದೆ.

ಜನವರಿ 26ರಂದು 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಬೊವೊ ಸುಬಿಯಾಂಟೊ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಇವರು ಅಧ್ಯಕ್ಷರಾದ ಬಳಿಕ ಅವರ ಮೊದಲ ಭಾರತ ಪ್ರವಾಸ ಇದಾಗಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಪ್ರಬೊವೊ ಸುಬಿಯಾಂಟೊ ಎರಡು ದಿನಗಳ ಕಾಲ (ಜ.25, 26) ಭಾರತ ಪ್ರವಾಸದಲ್ಲಿರುವರು.

ಇಂಡೋನೇಷ್ಯಾ ಅಧ್ಯಕ್ಷರ ಈ ಭೇಟಿ ಉಭಯ ದೇಶಗಳ ನಾಯಕತ್ವವನ್ನು ಬಲಪಡಿಸಲಿದೆ. ದ್ವಿಪಕ್ಷೀಯ ಸಂಬಂಧಗಳ ಸಮಗ್ರ ಪರಿಶೀಲನೆ, ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳನ್ನು ಚರ್ಚಿಸಲು ಈ ಭೇಟಿ ಉತ್ತಮ ಅವಕಾಶ ಒದಗಿಸುತ್ತದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

Join Whatsapp
Exit mobile version