ಇಂಡೋನೇಷ್ಯಾದ ಜೈಲಿನಲ್ಲಿ ಅಗ್ನಿ ಅವಘಡ: 41 ಕೈದಿಗಳ ಸಾವು

Prasthutha|

ಜಕಾರ್ತ: ಇಂಡೋನೇಷ್ಯಾದ ಬಾಂಟೆನ್ ಪ್ರಾಂತ್ಯದ ಜೈಲಿನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 41 ಜನರು ಮೃತಪಟ್ಟಿರುವ ಘಟನೆ ವರದಿಯಾಗಿದೆ.


ಅವಘಡಕ್ಕೆ ಕಾರಣವನ್ನು ತಿಳಿಯಲು ತನಿಖೆ ಕೈಗೊಳ್ಳಲಾಗಿದ್ದು,. ಬುಧವಾರ ಮಧ್ಯರಾತ್ರಿ 1 ರಿಂದ 2 ಗಂಟೆ ವೇಳೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

- Advertisement -

ಅಗ್ನಿ ಅವಘಡ ಸಂಭವಿಸಿದ್ದಾಗ ಎಷ್ಟು ಮಂದಿ ಅಲ್ಲಿದ್ದರು ಎನ್ನುವ ಕುರಿತು ಮಾಹಿತಿ ಇನ್ನೂ ಹೊರಬರಬೇಕಿದೆ. ಸದ್ಯ ಅಧಿಕಾರಿಗಳು ಇನ್ನೂ ಕಾರಾಗೃಹದಲ್ಲಿದ್ದವರನ್ನು ಸ್ಥಳಾಂತರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

- Advertisement -