Home ಟಾಪ್ ಸುದ್ದಿಗಳು ಪಾರ್ಲಿಮೆಂಟ್‌ನಲ್ಲಿ ಒಂದು ಪ್ರಶ್ನೆ ಕೇಳದೇ ಎಲೆಕ್ಷನ್‌ಗಾಗಿ ಕೋಮುವಾದದಲ್ಲಿ ತೊಡಗಿದ್ದಾರೆ: ಅನಂತ್ ಕುಮಾರ್ ಹೆಗಡೆಗೆ ಯತೀಂದ್ರ...

ಪಾರ್ಲಿಮೆಂಟ್‌ನಲ್ಲಿ ಒಂದು ಪ್ರಶ್ನೆ ಕೇಳದೇ ಎಲೆಕ್ಷನ್‌ಗಾಗಿ ಕೋಮುವಾದದಲ್ಲಿ ತೊಡಗಿದ್ದಾರೆ: ಅನಂತ್ ಕುಮಾರ್ ಹೆಗಡೆಗೆ ಯತೀಂದ್ರ ಟಾಂಗ್

ಗದಗ: ಸಿಎಂ ಸಿದ್ದರಾಮಯ್ಯ ಅವರನ್ನು ‘ಸಿದ್ದರಾಮುಲ್ಲಾ ಖಾನ್ ಎಂದು ಟೀಕಿಸಿದ್ದ ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆಗೆ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಗದಗದಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಯಾರು ಎಲ್ಲಾ ಸಮುದಾಯಗಳಿಗಾಗಿ ಕೆಲಸ ಮಾಡ್ತಾರೋ ಅವರನ್ನು ಒಂದು ಸಮುದಾಯದ ಪರ ಎಂದು ಬಿಂಬಿಸುವ ಷಡ್ಯಂತ್ರ ನಡೆಯುತ್ತಿದೆ. ಇಂದು ಬಿಜೆಪಿಗರ ಹಳೆಯ ತಂತ್ರಗಾರಿಕೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅನಂತ ಕುಮಾರ ಹೆಗಡೆ ಕಳೆದ 5 ವರ್ಷಗಳಲ್ಲಿ ಏನೂ ಕೆಲಸ ಮಾಡಿಲ್ಲ. ಸಂಸತ್‌ನಲ್ಲಿ ಒಂದೂ ಪ್ರಶ್ನೆ ಕೇಳಿಲ್ಲ. ಈಗ ಎಲೆಕ್ಷನ್ ಬಂದಿದೆ ಎಂದು ಹಿಂದೂ ಮುಸ್ಲಿಮರ ಮಧ್ಯೆ ಭಿನ್ನಾಭಿಪ್ರಾಯ ತರಲು ವ್ಯವಸ್ಥಿತವಾಗಿ ಮಾತನಾಡುತ್ತಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ನಮ್ಮ ತೆರಿಗೆ ನಮ್ಮ ಹಕ್ಕು ಅಭಿಯಾನಕ್ಕೆ ‘ಅಪ್ಪನ ಮನೆಯ ಹಣ ಅಲ್ಲ’ ಎಂಬ ಅನಂತ ಕುಮಾರ್ ಹೆಗಡೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಯತೀಂದ್ರ, ಅದು ಕರ್ನಾಟಕದಿಂದ ಕಟ್ಟಿರುವ ತೆರಿಗೆ, ಕೇಂದ್ರದ ಅಪ್ಪನ ಮನೆಯದ್ದಲ್ಲ ಎಂದು ನಾವೂ ಕೇಳ್ತೇವೆ.‌ ಕೇಂದ್ರ ಸರ್ಕಾರ ಎಲ್ಲರಿಗೂ ನ್ಯಾಯಯುತ ಹಂಚಿಕೆ ಮಾಡಿ ಎಂದು ಹೇಳ್ತಿದೀವಿ. ನಾವು ಕಟ್ಟಿದ ಅಷ್ಟೂ ತೆರಿಗೆ ನಮಗೆ ಕೊಡಿ ಎಂದೇನೂ ಕೇಳುತ್ತಿಲ್ಲ ಎಂದು ಹೇಳಿದರು.

Join Whatsapp
Exit mobile version